ಕುಲಭೂಷಣ್ ಜಾಧವ್ 
ವಿದೇಶ

'ಬಲವಂತದ ತಪ್ಪೊಪ್ಪಿಗೆ' ಮೇಲೆ ಜಾಧವ್ ಗೆ ಶಿಕ್ಷೆ, ತಕ್ಷಣ ಅವರನ್ನು ಬಿಡುಗಡೆ ಮಾಡಿ: ಐಸಿಜೆಗೆ ಭಾರತ ಮನವಿ

ಪಾಕಿಸ್ತಾನ 'ಬಲವಂತದ ತಪ್ಪೊಪ್ಪಿಗೆ' ಆಧಾರದ ಮೇಲೆ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಅವರನ್ನು ಕೂಡಲೇ....

ಹೇಗ್: ಪಾಕಿಸ್ತಾನ 'ಬಲವಂತದ ತಪ್ಪೊಪ್ಪಿಗೆ' ಆಧಾರದ ಮೇಲೆ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಭಾರತ ಬುಧವಾರ ಅಂತರಾಷ್ಟ್ರೀಯ ನ್ಯಾಯಾಲಯ(ಐಸಿಜೆ)ಕ್ಕೆ ಮನವಿ ಮಾಡಿದೆ.
ಕಳೆದ ಸೋಮವಾರದಿಂದ ಐಸಿಜೆಯಲ್ಲಿ ಜಾಧವ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಜಾಧವ್ ಪ್ರಕರಣದ ವಿಚಾರಣೆ ನಡೆಸಿದ ಪಾಕ್ ಸೇನಾ ಕೋರ್ಟ್ ಇಡೀ ಪ್ರಕ್ರಿಯೆಯಲ್ಲಿ ಕನಿಷ್ಠ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಸೇನಾ ಕೋರ್ಟ್ ನ ವಿಚಾರಣೆ ಹಾಗೂ ಗಲ್ಲು ಶಿಕ್ಷೆ ನೀಡಿರುವುದು ಕಾನೂನು ಬಾಹಿರ ಎಂದು ಘೋಷಿಸಿಬೇಕು ಮತ್ತು ಜಾಧವ್ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಪಾಕಿಸ್ತಾನಕ್ಕೆ ಆದೇಶಿಸಬೇಕು ಎಂದು ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ದೀಪಕ್ ಮಿತ್ತಲ್ ಅವರು ಐಸಿಜೆ ನ್ಯಾಯಾಧೀಶರಿಗೆ ಮನವಿ ಮಾಡಿದರು.
ಜಾಧವ್ ಅವರು ಉಗ್ರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಸಮರ್ಥ ಸಾಕ್ಷ್ಯ ಒದಗಿಸುವಲ್ಲಿ ಪಾಕಿಸ್ತಾನ ವಿಫಲವಾಗಿದೆ. ಅಲ್ಲದೆ ಜಾಧವ್ ಅವರನ್ನು ಬಲವಂತದಿಂದ ತಪ್ಪೊಪ್ಪಿಕೊಳ್ಳುವಂತೆ ಮಾಡಲಾಗಿದೆ ಎಂದು ವಕೀಲ ಹರೀಶ್ ಸಾಳ್ವೆ ಅವರು ಭಾರತದ ಪರ ವಾದ ಮಂಡಿಸಿದರು.
ಪಾಕಿಸ್ತಾನ ಕುಲಭೂಷಣ್ ಜಾಧವ್ ಅವರ ತಪ್ಪೊಪ್ಪಿಗೆ ದಾಖಲೆಗಳನ್ನು ಪ್ರಚಾರದ ಸಾಧನವಾಗಿ ಬಳಸಿಕೊಳ್ಳುತ್ತಿದೆ ಎಂದು ಸಾಳ್ವೆ ಹೇಳಿದರು.
ಜಾಧವ್ ವಿರುದ್ಧ 2016ರ ಏಪ್ರಿಲ್ ನಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 2016ರ ಮೇ ತಿಂಗಳಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಈ ಬಗ್ಗೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆ ವಿಯೆನ್ನಾ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಭಾರತ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel