ಸಂಗ್ರಹ ಚಿತ್ರ 
ವಿದೇಶ

ವಿಶ್ವಸಂಸ್ಥೆ: ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಹಿನ್ನಡೆ, ಭದ್ರತಾ ಮಂಡಳಿಯಲ್ಲಿ ಪುಲ್ವಾಮ ದಾಳಿಗೆ ತೀವ್ರ ಖಂಡನೆ

ಜಾಗತಿಕ ಮಟ್ಟದಲ್ಲಿ ಭಾರತದ ಎದುರು ಚೀನಾಗೆ ಮತ್ತೊಂದು ಭಾರಿ ಮುಖಭಂಗವಾಗಿದ್ದು, ಚೀನಾದ ವಿರೋಧದ ನಡುವೆಯೂ ಪುಲ್ವಾಮ...

ವಾಷಿಂಗ್ಟನ್: ಜಾಗತಿಕ ಮಟ್ಟದಲ್ಲಿ ಭಾರತದ ಎದುರು ಚೀನಾಗೆ ಮತ್ತೊಂದು ಭಾರಿ ಮುಖಭಂಗವಾಗಿದ್ದು, ಚೀನಾದ ವಿರೋಧದ ನಡುವೆಯೂ ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.
ಹೌದು.. ಜಾಗತಿಕ ಮಟ್ಟದಲ್ಲಿ ಚೀನಾ ಮತ್ತೊಮ್ಮೆ ಭಾರತದ ರಾಜತಾಂತ್ರಿಕತೆ ಮುಂದೆ ಮಂಡಿಯೂರಿದ್ದು, ಉಗ್ರ ದಾಳಿಗೆ ಪ್ರಾಯೋಜಕತ್ವ ವಹಿಸುತ್ತಿರುವ ಪಾಕಿಸ್ತಾನಕ್ಕೆ ಬೆಂಬಲವಾಗಿ ನಿಂತು ತೀವ್ರ ಮುಜುಗರವನ್ನು ಅನುಭವಿಸಿದೆ. ಕಳೆದ ವಾರ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದು, ಅದರ ಹೊಣೆಯನ್ನು ಪಾಕಿಸ್ತಾನ ಮೂಲದ ಜೈಶ್ ಇ ಮೊಹ್ಮದ್ ಸಂಘಟನೆ ಹೊತ್ತುಕೊಂಡಿದ್ದು, ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಚೀನಾ ಪಾಕಿಸ್ತಾನದ ಬೆನ್ನಿಗೆ ನಿಂತಿತ್ತು. 
ಆದರೆ ಭಾರತದ ಪ್ರಬಲ ವಾದಮಂಡನೆಯಿಂದಾಗಿ ವಿಶ್ವಸಂಸ್ಛೆ ಕೂಡ ಉಗ್ರ ದಾಳಿಯಲ್ಲಿ ಪಾಕ್ ಮೂಲದ ಉಗ್ರರ ಕೈವಾಡವನ್ನು ಒಪ್ಪಿಕೊಂಡಿದ್ದು, ವಿಶ್ವಸಂಸ್ಥೆ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. 'ಜಮ್ಮು-ಕಾಶ್ಮೀರದಲ್ಲಿ ನಡೆದದ್ದು ಹೇಯ ಹಾಗೂ ಹೇಡಿ ಆತ್ಮಾಹುತಿ ಬಾಂಬರ್ ದಾಳಿ. ಅದರಲ್ಲಿ ಭಾರತೀಯ ಅರೆ ಸೇನಾ ಪಡೆಯ ನಲವತ್ತು ಮಂದಿ ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಇದರ ಹೊಣೆಯನ್ನು ಜೈಶ್ ಇ ಮೊಹ್ಮದ್ ಹೊತ್ತುಕೊಂಡಿದೆ ಎಂದು ವಿಶ್ವಸಂಸ್ಛೆಯ ಹೇಳಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel