ಚೀನಾ ವಿದೇಶಾಂಗ ಸಚಿವ ವಾಂಗ್ ಯಿ
ವುಜೆನ್(ಚೀನಾ): ಭಾರತ ಮತ್ತು ಚೀನಾ ಮಧ್ಯೆ ಈ ವರ್ಷ ನಡೆಯುತ್ತಿರುವ ಮೊದಲ ಸಭೆಯಾಗಿದ್ದು ದ್ವಿಪಕ್ಷೀಯ ಸಂಬಂಧಗಳ ಕುರಿತು ಮಾತುಕತೆ ನಡೆಸಲು ಮತ್ತು ಸಹಕಾರ ಮುಂದುವರಿಸಲು ಇದು ವೇದಿಕೆಯಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಚೀನಾ-ರಷ್ಯಾ-ಭಾರತ ದೇಶಗಳ 16ನೇ ಸಭೆ ಚೀನಾದಲ್ಲಿ ನಡೆಯುತ್ತಿದ್ದು ಅಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿ, ಜೆಇಎಂ ಸಂಘಟನೆಯ ನಾಶ ಮತ್ತು ಪಾಕಿಸ್ತಾನ ಉಗ್ರರಿಕೆ ಸಹಾಯ ಮಾಡುತ್ತಿರುವ ಬಗ್ಗೆ ಸುಷ್ಮಾ ಸ್ವರಾಜ್ ಪ್ರಸ್ತಾಪಿಸಿದ್ದಾರೆ.
ಭಾರತ-ಚೀನಾ ದ್ವಿಪಕ್ಷೀಯ ಸಂಬಂಧದಲ್ಲಿ ಗುರುತರ ಬೆಳವಣಿಗೆ ಹೊಂದಲು ಉಭಯ ದೇಶಗಳ ಪ್ರಧಾನ ಮಂತ್ರಿಗಳು ಸೂಚಿಸಿರುವ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದು ಅತ್ಯಗತ್ಯವಾಗಿದೆ, ಎರಡೂ ರಾಷ್ಟ್ರಗಳು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದು ಅದನ್ನು ನಾವು ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕಾಗಿದೆ ಎಂದರು.
ಪಾಕಿಸ್ತಾನದಲ್ಲಿ ಉಗ್ರರ ಶಿಬಿರ ನೆಲೆಯ ಮೇಲೆ ಭಾರತೀಯ ವಾಯುಸೇನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚೀನಾ ವಕ್ತಾರರು, ಇತ್ತೀಚಿನ ವರದಿಗಳು ನಮ್ಮ ಗಮನಕ್ಕೆ ಬಂದಿದೆ. ದಕ್ಷಿಣ ಏಷ್ಯಾದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಮುಖ್ಯವಾಗಿದೆ. ಎರಡೂ ದೇಶಗಳ ಮಧ್ಯೆ ದ್ವಿಪಕ್ಷೀಯ ಸಂಬಂಧ ಮತ್ತು ಸಹಕಾರ ವೃದ್ಧಿ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಲು ಮುಖ್ಯವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics