ಇಮ್ರಾನ್ ಖಾನ್ 
ವಿದೇಶ

ಯುದ್ಧ ಆರಂಭವಾದರೆ ಅದರ ನಿಯಂತ್ರಣ ನನ್ನ ಅಥವಾ ಮೋದಿ ಕೈಯಲ್ಲಿ ಇಲ್ಲ: ಇಮ್ರಾನ್​ ಖಾನ್

ಒಂದು ವೇಳೆ ಯುದ್ಧ ಆರಂಭವಾದರೆ ಅದು ಹೇಗೆ ಅಂತ್ಯವಾಗುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಅದರ ನಿಯಂತ್ರಣ ನನ್ನ ಕೈಯಲ್ಲೂ ಇರುವುದಿಲ್ಲ...

ಇಸ್ಲಾಮಾಬಾದ್​: ಒಂದು ವೇಳೆ ಯುದ್ಧ ಆರಂಭವಾದರೆ ಅದು ಹೇಗೆ ಅಂತ್ಯವಾಗುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಅದರ ನಿಯಂತ್ರಣ ನನ್ನ ಕೈಯಲ್ಲೂ ಇರುವುದಿಲ್ಲ ಮತ್ತು ಮೋದಿ ಕೈಯಲ್ಲೂ ಇರುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಅವರು ಬುಧವಾರ ಹೇಳಿದ್ದಾರೆ. 
ಭಾರತ- ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ಶಾಂತಿ ಮಾತುಕತೆಯ ಮಾತನಾಡಿರುವ ಇಮ್ರಾನ್​ ಖಾನ್​, ಭಯೋತ್ಪಾದನೆ ಬಗ್ಗೆ ನಿಮಗೆ ಏನಾದರೂ ಮಾತನಾಡಬೇಕಿದ್ದರೆ ನಾವು ಸಿದ್ಧರಿದ್ದೇವೆ. ನಮ್ಮ ನಡುವಿನ ಸದುದ್ದೇಶಕ್ಕೆ ಜಯವಾಗಬೇಕು. ನಾವಿಬ್ಬರೂ ಕುಳಿತು ಚರ್ಚೆ ಮಾಡಬೇಕಿದೆ ಎಂದಿದ್ದಾರೆ.
ಈ ಜಗತ್ತಿನ ಎಲ್ಲ ಯುದ್ಧಗಳು ನಡೆದಿರುವುದೂ ತಪ್ಪು ಲೆಕ್ಕಾಚಾರಗಳಿಂದಲೇ. ಇದುವರೆಗೆ ಯುದ್ಧ ಆರಂಭಿಸಿದವರಿಗೆಲ್ಲ ತಾವು ಆರಂಭಿಸಿದ ಯುದ್ಧ ಎಲ್ಲಿ ಅಂತ್ಯವಾಗುತ್ತದೆ ಎಂಬುದೇ ತಿಳಿದಿರಲಿಲ್ಲ. ಹೀಗಾಗಿ ನಾನು ಭಾರತಕ್ಕೆ ಹೇಳುವುದೇನೆಂದರೆ, ನೀವು ಶಸ್ತ್ರಾಸ್ತ್ರಗಳೊಂದಿಗೆ ಬಂದರೆ ನಮ್ಮ ಬಳಿಯೂ ಆಯುಧಗಳಿವೆ. ನಾವು ತಪ್ಪು ಲೆಕ್ಕಾಚಾರಗಳಿಗೆ ಜಾಗ ಮಾಡಿಕೊಡಬೇಕೆ? ಎಂದು ಪಾಕ್ ಪ್ರಧಾನಿ ಪ್ರಶ್ನಿಸಿದ್ದಾರೆ.
ಭಾರತದಿಂದ ಪ್ರಚೋದನೆ ಬಂದಾಗ ಪಾಕಿಸ್ತಾನವು ಎರಡು ಭಾರತೀಯ ಯುದ್ಧವಿಮಾನಗಳನ್ನು ಒಡೆದುರುಳಿಸಿತು. ಆದರೆ, ನಾವು ಯಾವುದೇ ವ್ಯಕ್ತಿ ಹಾಗೂ ಸೇನಾ ಪಡೆಗಳಿಗೆ ಹಾನಿಯಾಗದಂತೆ ಕಾರ್ಯಾಚರಣೆ ನಡೆಸಿದವು. ನಮ್ಮನ್ನು ಪ್ರಚೋದಿಸಿದಾಗ ಸರಿಯಾಗಿ ತಿರುಗೇಟು ಕೊಡುವಷ್ಟು ಸಾಮರ್ಥ್ಯ ನಮ್ಮಲ್ಲಿದೆ ಎಂದು ನಾವು ತೋರಿಸಬೇಕಿತ್ತು ಅಷ್ಟೇ… ನೀವು ನಮ್ಮ ದೇಶದೊಳಗೆ ಪ್ರವೇಶ ಮಾಡಿದಾಗ ನಾವೂ ಕೂಡ ನಿಮ್ಮ ಗಡಿಯೊಳಗೆ ಬರಬಲ್ಲೆವು. ಪಾಕಿಸ್ತಾನದ ವಾಯು ಪ್ರದೇಶದೊಳಗೆ ಬಂದ 2 ಮಿಗ್ ಯುದ್ಧವಿಮಾನಗಳನ್ನ ನಾವು ಕೆಳಗುರುಳಿಸಿದೆವು. ಆದರೆ, ಇಷ್ಟಾದ ನಂತರ ನಮ್ಮ ಮುಂದಿನ ದಾರಿಗಳೇನು? ನಾವು ಕುಳಿತು ಮಾತುಕತೆ ಮೂಲಕ ನಮ್ಮ ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಕೊಳ್ಳಬೇಕು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ