ಉಭಯ ರಾಷ್ಚ್ರಗಳ ನಡುವೆ ಪ್ರಕ್ಷುಬ್ದ ವಾತಾವರಣ: ಸಂಜೋತಾ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು
ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ದ ಪರಿಸ್ಥಿತಿ ಉಂಟಾಗಿದ್ದು, ಲಾಹೋರ್-ದೆಹಲಿ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಪ್ರಯಾಣ ರದ್ದುಗೊಳಿಸಲಾಗಿದೆ...
ಲಾಹೋರ್: ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ದ ಪರಿಸ್ಥಿತಿ ಉಂಟಾಗಿದ್ದು, ಲಾಹೋರ್-ದೆಹಲಿ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಪ್ರಯಾಣ ರದ್ದುಗೊಳಿಸಲಾಗಿದೆ.
ಇಂದು ಬೆಳಗ್ಗೆ 8ಗಂಟೆಗೆ ಸಂಜೋತಾ ಎಕ್ಸ್ ಪ್ರೆಸ್ ಲಾಹೋರ್ ರೈಲ್ವೆ ನಿಲ್ದಾಣದಿಂದ ಹೊರಡಬೇಕಿತ್ತು, ಆದರೆ ಗಡಿಯಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿರುವುದರಿಂದ ಸಂಜೋತಾ ಎಕ್ಸ್ ಪ್ರೆಸ್ ಸಂಚಾರ ರದ್ದುಗೊಳಿಸಲಾಗಿದೆ.
ಮುಂಜಾಗರೂಕತಾ ಕ್ರಮವಾಗಿ ರೈಲು ಸಂಚಾರ ರದ್ಧುಗೊಳಿಸಿದ್ದಾಗಿ ರೈಲ್ವೆ ಮ್ಯಾನೇಜರ್ ಜುಬೈರ್ ಶಫಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.