ವಿದೇಶ

ನಾನು 'ಮನ್ ಕೀ ಬಾತ್' ಹೇಳಲ್ಲ: ದುಬೈನಲ್ಲಿ ಪ್ರಧಾನಿ ಮೋದಿಗೆ ರಾಹುಲ್ ಟಾಂಗ್

Lingaraj Badiger
ದುಬೈ: ನಾನು 'ಮನ್ ಕೀ ಬಾತ್' ಹೇಳುವುದಕ್ಕೆ ಇಲ್ಲಿಗೆ ಬಂದಿಲ್ಲ. ನಿಮ್ಮ ಸಮಸ್ಯೆ ಆಲಿಸುವುದಕ್ಕೆ ಬಂದಿದ್ದೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ದುಬೈ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇಂದು ಜಬೆಲ್ ಅಲಿ ಲೇಬರ್ ಕಾಲೋನಿಯಲ್ಲಿ ಭಾರತೀಯ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು. 
ಭಾರತೀಯ ಕಾರ್ಮಿಕರ ಕಠಿಣ ಪರಿಶ್ರಮದಿಂದ ದೇಶ ಹೆಮ್ಮೆಪಡುವಂತಾಗಿದೆ. ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಅರಿವಿದೆ. ಹೀಗಾಗಿ ಅವರ ಸಹಾಯಕ್ಕೆ ನಮ್ಮ ಪಕ್ಷ ಬದ್ಧವಾಗಿದೆ ಎಂದು ಹೇಳಿದರು.
ಇದಕ್ಕು ಮುನ್ನ ಗಲ್ಫ್ ನ್ಯೂಸ್ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದ ರಾಹುಲ್, 1984ರ ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ ಅಪರಾಧಿ ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದರು.
ಇದೇ ಮೊದಲ ಬಾರಿಗೆ ಈ ವಿಚಾರವಾಗಿ ಪ್ರತಿಕ್ರಿಯಿಸಿದ ರಾಹುಲ್. ‘1984ರ ಸಿಖ್ ಹತ್ಯಾಕಾಂಡದಲ್ಲಿ ಪಾಲ್ಗೊಂಡವರು ಯಾರೇ ಆಗಿರಲಿ, ಯಾವ ಪಕ್ಷಕ್ಕೇ ಸೇರಿರಲಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಅಲ್ಪ ಸಂಖ್ಯಾತರನ್ನು ತುಳಿದು ಮೇಲೆ ಬರಬಲ್ಲೆವು ಎಂಬ ಲೋಚನೆ ಹೊಂದಿರುವವರನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದರು.
SCROLL FOR NEXT