ವಿದೇಶ

ಇಂಡೋನೇಷ್ಯಾದಲ್ಲಿ 6.9 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

Lingaraj Badiger
ಜಕಾರ್ತ: ಇಂಡೋನೇಷ್ಯಾದಲ್ಲಿ ಭಾನುವಾರ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ಅದರ ತೀವ್ರತೆ 6.9ರಷ್ಟು ದಾಖಲಾಗಿದೆ.
ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 6.9ರಷ್ಟಿತ್ತು ಎಂದು ಅಮೆರಿಕದ ಭೂ ವಿಜ್ಞಾನ ಸಂಸ್ಥೆ ಮಾಹಿತಿ ನೀಡಿದೆ.
ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸಮುದ್ರದ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ. 
ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎನ್ನಲಾಗಿದೆ. 
SCROLL FOR NEXT