ನರೇಂದ್ರ ಮೋದಿ, ಏಂಜೆಲಾ ಮರ್ಕೆಲ್ 
ವಿದೇಶ

ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಜತೆ ಪ್ರಧಾನಿ ಮೋದಿ ಮಾತುಕತೆ

ಜಿ 20 ದೇಶಗಳ ಶೃಂಗಸಭೆಯ ಬಿಡುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿ ಚಾನ್ಸಲರ್ ಎಂಜಿಲಾ ಮರ್ಕೆಲ್ ಅವರೊಂದಿಗೆ...

ಒಸಾಕ(ಜಪಾನ್): ಜಿ 20 ದೇಶಗಳ ಶೃಂಗಸಭೆಯ ಬಿಡುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ಜರ್ಮನಿ ಚಾನ್ಸಲರ್ ಎಂಜಿಲಾ ಮರ್ಕೆಲ್ ಅವರೊಂದಿಗೆ ಶುಕ್ರವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಜಿ20 ಒಸಕಾ ಶೃಂಗಸಭೆಯ ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಜರ್ಮನಿ ಚಾನ್ಸಲರ್  ಏಂಜಿಲಾ ಮರ್ಕೆಲ್ ಅವರನ್ನು ಭೇಟಿ ಮಾಡಿ ಉಭಯ ದೇಶಗಳ ನಡುವಣ ಸ್ನೇಹ ಮತ್ತಷ್ಟು ಶ್ರೀಮಂತಗೊಳಿಸುವ ಮಾತುಕತೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಕೃತಕ ಬುದ್ಧಿ ಮತ್ತೆ,  ಇ- ಮೊಬಿಲಿಟಿ ರೈಲ್ವೆ ಆಧುನಿಕರಣ ಹಾಗೂ ಕೌಶಲ್ಯ ಅಭಿವೃದ್ಧಿ ವಲಯದಲ್ಲಿ ಸಹಕಾರ ವರ್ಧನೆ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು ಎಂದು  ರವೀಶ್ ಕುಮಾರ್ ಹೇಳಿದ್ದಾರೆ.
ಕೊರಿಯಾ ಅಧ್ಯಕ್ಷ ಮೂನ್ ಜೆ- ಇನ್ ಅವರೊಂದಿಗಿನ ತಮ್ಮ ಸಂವಾದ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಒಳ್ಳೆಯ ಗೆಳೆಯ ಕೊರಿಯಾ ಅಧ್ಯಕ್ಷ ಮೂನ್ ಜೆ-ಇನ್ ಅವರೊಂದಿಗಿನ ಭೇಟಿ ಯಾವಾಗಲೂ ವಿಶೇಷತೆಯಿಂದ ಕೂಡಿರುತ್ತದೆ. ಭಾರತ ಹಾಗೂ ಕೊರಿಯಾ ಗಣರಾಜ್ಯದ ನಡುವಣ ಬಾಂಧವ್ಯ ಮತ್ತಷ್ಟು ಬಲಪಡಿಸಲು ಅವರು ಉತ್ಸುಕರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ವ್ಯಾಪಾರ, ಆರ್ಥಿಕತೆ  ಹಾಗೂ ಪರಸ್ಪರ ದೇಶಗಳ ಜನರ ನಡುವಣ ಸಂಬಂಧ  ವೃದ್ಧಿಗೆ ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆ ನಾವು ಇಂದು ಮಾತುಕತೆ ನಡೆಸಿದವು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ
ಈ ನಡುವೆ, ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, ಕೆನಡಾ ವಿದೇಶಾಂಗ ಸಚಿವ ರಿಸ್ಟಿಯಾ ಫ್ರೀಲ್ಯಾಂಡ್ ಅವರೊಂದಿಗೆ ಮಾತುಕತೆ ನಡೆಸಿದರು. 
ಜಿ20 ಶೃಂಗಸಭೆಯಲ್ಲಿ ತಮ್ಮ ಕೆನಡಾ  ಸಹವರ್ತಿ ರಿಸ್ಟಿಯಾ ಫ್ರೀಲ್ಯಾಂಡ್ ಅವರನ್ನು ಭೇಟಿ ಮಾಡಿದ್ದು ಸಂತಸದ ವಿಷಯ ವಾಗಿದ್ದು, ನಮ್ಮೆರಡೂ ದೇಶಗಳ ಹಿತಾಸಕ್ತಿ ಹಾಗೂ ಕಳವಳವನ್ನು ಪ್ರತಿನಿಧಿಸುವ ಬಾಂಧವ್ಯ ನಿರ್ಮಿಸಿಲು ತಾವು ಎದುರು ನೋಡುತ್ತಿರುವುದಾಗಿ  ಜೈಶಂಕರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT