ಹಳೆ ಚಾಳಿ ಬಿಡದ ಪಾಕಿಸ್ತಾನ, ಮತ್ತೆ ಉಗ್ರ ಸಮರ್ಥನೆ: ಪುಲ್ವಾಮ ದಾಳಿಗೆ ಜೈಶ್ ಕಾರಣವಲ್ಲವಂತೆ! 
ವಿದೇಶ

ಹಳೇ ಚಾಳಿ ಬಿಡದ ಪಾಕಿಸ್ತಾನ, ಮತ್ತೆ ಉಗ್ರ ಸಮರ್ಥನೆ: ಪುಲ್ವಾಮ ದಾಳಿಗೆ ಜೈಶ್ ಕಾರಣವಲ್ಲವಂತೆ!

ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿ ಭಾರತದ ಮುಂದೆ ಮಂಡಿಯೂರುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ...

ನವದೆಹಲಿ: ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿ ಭಾರತದ ಮುಂದೆ ಮಂಡಿಯೂರುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ ಪಾಕಿಸ್ತಾನ ತನ್ನ ಹಳೆಯ ಚಾಳಿಯನ್ನು ಇನ್ನೂ ಬಿಟ್ಟಿಲ್ಲ.
ಪುಲ್ವಾಮ ದಾಳಿ ಬಗ್ಗೆ ಸಾಕ್ಷ್ಯ ಕೊಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿದ್ದ ಪಾಕಿಸ್ತಾನ ಈಗ ವರಸೆ ಬದಲಿಸಿದ್ದು, ಪುಲ್ವಾಮ ದಾಳಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಕಾರಣವಲ್ಲ ಎಂದು ಹೇಳಲು ಪ್ರಾರಂಭಿಸಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯನ್ನು ಸಮರ್ಥಿಸಿಕೊಂಡಿದೆ. ಪುಲ್ವಾಮ ದಾಳಿಯ ಕೆಲವೇ ಕ್ಷಣಗಳಲ್ಲಿ ದಾಳಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿತ್ತು. ಆದರೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಮಾತ್ರ ಪುಲ್ವಾಮ ದಾಳಿಯಲ್ಲಿ ಜೈಶ್-ಉಗ್ರ ಸಂಘಟನೆಯ ಕೈವಾಡ ಇಲ್ಲ ಎಂದು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮ ದಾಳಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಎಲ್ಲಿಯೂ ಹೊಣೆ ಹೊತ್ತುಕೊಂಡಿಲ್ಲ ಎಂದು ಹೇಳಿರುವ ಖುರೇಷಿ,  "ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಯಕರನ್ನು ಸಂಪರ್ಕಿಸಿದಾಗ ಅವರು ಇಲ್ಲ ಎಂದು ಹೇಳಿದ್ದರು, ಇದು ಗೊಂದಲಕ್ಕೆ ಕಾರಣವಾಗಿದೆ. ಪುಲ್ವಾಮ ದಾಳಿಗೆ ಹೊಣೆ ಹೊತ್ತಿರುವ ಬಗ್ಗೆ ಗೊಂದಲಗಳಿವೆ. ಪಾಕಿಸ್ತಾನ ಹೇಳುವುದನ್ನು ಭಾರತ ಕೇಳಿದಿದ್ದರೆ ಉಭಯ ರಾಷ್ಟ್ರಗಳ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಭಾರತ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಿದರೆ ಮಾತ್ರ ನಾವು ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.  ನಾವು ಸಹಕಾರ ನೀಡಲು ಸಿದ್ದರಿದ್ದೇವೆ, ಮಾತುಕತೆ ನಡೆಸೋಣ, ಇದೇ ನಮ್ಮ ಮುಂದಿರುವ ಅತ್ಯುತ್ತಮವಾದ ಆಯ್ಕೆ ಎಂದು ಖುರೇಷಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT