ವಿದೇಶ

ಭಾರತದ ಪ್ರತಿತಂತ್ರಗಳಿಗೆ ಹೆದರಿತ ಪಾಕ್? ಮಸೂದ್‌ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸಲು ಪಾಕ್ ಬೆಂಬಲ!

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್ ನೆಲದಲ್ಲಿ ನಡೆಸಿದ ಏರ್ ಸ್ಟ್ರೈಕ್ ನಂತರ ಜಾಗತಿಕ ಮಟ್ಟದಲ್ಲಿ ಏಕಾಂಗಿಯಾಗಿರುವ...

ಇಸ್ಲಾಮಾಬಾದ್: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್ ನೆಲದಲ್ಲಿ ನಡೆಸಿದ ಏರ್ ಸ್ಟ್ರೈಕ್ ನಂತರ ಜಾಗತಿಕ ಮಟ್ಟದಲ್ಲಿ ಏಕಾಂಗಿಯಾಗಿರುವ ಪಾಕಿಸ್ತಾನ ಈಗ ತನ್ನ ಮಾನ ಉಳಿಸಿಕೊಳ್ಳಲು ಉಗ್ರ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋಗಿರುವ ಮಾನ ಕಾಪಾಡಿಕೊಳ್ಳಲು ತನ್ನ ನೆಲದಲ್ಲಿ ಬೀಡು ಬಿಟ್ಟಿರುವ ಉಗ್ರ ಸಂಘಟನೆಗೆಳು ಹಾಗೂ ಅದರ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಹೆಸರನ್ನು ಜಾಗತಿಕ ಭಯೋತ್ಪಾದಕನ ಪಟ್ಟಿಗೆ ಸೇರಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಹೊಸ ಪ್ರಸ್ತಾಪನೆಯನ್ನು ಪಾಕಿಸ್ತಾನ ಬೆಂಬಲಿಸಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಭಾರತ ಮತ್ತು ಪಾಕಿಸ್ತಾನ ವಾಯು ಸಂಘರ್ಷದ ಬಳಿಕ ಅಜರ್ ಹೆಸರನ್ನು ಜಾಗತಿಕ ಉಗ್ರನ ಪಟ್ಟಿಗೆ ಸೇರಿಸಲು ಭದ್ರತಾ ಮಂಡಳಿಯ ಐದು ಕಾಯಂ ಸದಸ್ಯ ರಾಷ್ಟ್ರಗಳ ಪೈಕಿ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಹೊಸದಾಗಿ ಪ್ರಸ್ತಾವನೆ ಸಲ್ಲಿಸಿವೆ. 
ಈ ಪ್ರಸ್ತಾವನೆಗೆ ಎಂದಿನಂತೆ ಚೀನಾ ವಿರೋಧಿಸಿದೆ. ಆದರೆ ರಷ್ಯಾ ಬೆಂಬಲಿಸುವ ಮಾತನಾಡಿದೆ. ಪ್ರಸ್ತಾವನೆಯನ್ನು ವಿರೋಧಿಸುವ ನಿರ್ಧಾರದಿಂದ ಹಿಂದೆ ಸರಿದು ಅಂತಾರಾಷ್ಟ್ರೀಯ ಸಮುದಾಯದಲ್ಲಿ ತನ್ನ ಮಾನ ಉಳಿಸಿಕೊಳ್ಳಲು ಪಾಕಿಸ್ತಾನ ಮುಂದಾಗಿದೆ ಎನ್ನಲಾಗಿದೆ. ಈ ಪ್ರಸ್ತಾನವೆ ಅಂಗೀಕಾರಗೊಂಡರೆ ಅಜರ್ ನ ವಿದೇಶ ಪ್ರಯಾಣಕ್ಕೆ ಕಡಿವಾಣ ಬೀಳಲಿದೆ. ಅವನ ಸಂಘಟನೆಗೆ ಸೇರಿದ ಆಸ್ತಿಗಳನ್ನು ಹಾಗೂ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಕೂಲವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT