ಹಫೀಜ್ ಸಯೀದ್ 
ವಿದೇಶ

ಪ್ರಧಾನಿ ಮೋದಿ ಗುಡುಗು; ಹೆದರಿದ ಪಾಕ್‌ನಿಂದ ಜೆಯುಡಿ, ಎಫ್ಐಎಫ್ ಉಗ್ರ ಸಂಘಟನೆ ಬ್ಯಾನ್!

ಪಾಕಿಸ್ತಾನ ನೆಲದಲ್ಲಿ ಎಲ್ಲೆ ಅಡಗಿದ್ದರು ಭಯೋತ್ಪಾದಕರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಪ್ರಧಾನಿ ಮೋದಿ ಗುಡುಗಿದ್ದು ಇದೇ ವೇಳೆ ಭಾರತೀಯ ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ...

ಇಸ್ಲಾಮಾಬಾದ್: ಪಾಕಿಸ್ತಾನ ನೆಲದಲ್ಲಿ ಎಲ್ಲೆ ಅಡಗಿದ್ದರು ಭಯೋತ್ಪಾದಕರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಪ್ರಧಾನಿ ಮೋದಿ ಗುಡುಗಿದ್ದು ಇದೇ ವೇಳೆ ಭಾರತೀಯ ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಅವರು ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಹೇಳಿದ್ದ ಬೆನ್ನಲ್ಲೇ ಹೆದರಿದ ಪಾಕಿಸ್ತಾನ ಇದೀಗ ಜೆಯುಡಿ ಹಾಗೂ ಎಫ್ಐಎಫ್ ಉಗ್ರ ಸಂಘಟನೆಯನ್ನು ನಿಷೇಧಿಸಿದೆ.
ಮೋಸ್ಟ್ ವಾಂಡೆಟ್ ಉಗ್ರ ಹಫೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದವಾ(ಜೆಡಿಯು) ಮತ್ತು ಫಲಾ ಇ ಇನ್ಸಾನಿಯತ್ ಫೌಂಡೆಷನ್(ಎಫ್ಐಎಫ್)  ಅನ್ನು ನಿಷೇಧಿಸಿ ಪಾಕಿಸ್ತಾನ ಘೋಷಿಸಿದೆ.
ಕೊನೆಗೂ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಕಾಯ್ದೆ 1977ರ ಅಡಿಯಲ್ಲಿ ರಾಷ್ಟ್ರೀಯ ಭಯೋತ್ಪಾದನೆ ನಿಗ್ರಹ ಪ್ರಾಧಿಕಾರ ಇಂದು ಸಭೆ ನಡೆಸಿ ಈ ಘೋಷಣೆಯನ್ನು ಮಾಡಿದೆ.
ಇದಕ್ಕೂ ಮುನ್ನ ಜೈಷ್ -ಇ-ಮೊಹಮ್ಮದ್ ಉಗ್ರ ಸಂಘಟನೆ  ಮುಖ್ಯಸ್ಥ ಮಸೂದ್ ಅಝರ್ ಸಹೋದರ  ಹಾಗೂ ಇತರ ನಿಷೇಧಿತ ಉಗ್ರ ಸಂಘಟನೆಯ  43 ಸದಸ್ಯರನ್ನು ಬಂಧಿಸಿತ್ತು. ಅಲ್ಲದೆ ಸರ್ಕಾರದ ಆದೇಶದ ಪ್ರಕಾರ ನಿಷೇಧಿತ ಎಲ್ಲಾ ಉಗ್ರ ಸಂಘಟನೆಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು  ಎಂದು ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT