ವಿದೇಶ

121 ಉಗ್ರರನ್ನು ಬಂಧಿಸಿದ ಪಾಕ್, 182 ಮದರಸಾಗಳು ಸರ್ಕಾರದ ವಶಕ್ಕೆ

Lingaraj Badiger
ಇಸ್ಲಾಮಾಬಾದ್: ನಿಷೇಧಿತ ಉಗ್ರ ಸಂಘಟನೆಗಳ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದು, 182 ಮದರಸಾಗಳನ್ನು ಸರ್ಕಾರದ ನಿಯಂತ್ರಣಕ್ಕೆ ಪಡೆಯಲಾಗಿದೆ ಎಂದು ಗುರುವಾರ ಪಾಕಿಸ್ತಾನ ಹೇಳಿಕೊಂಡಿದೆ.
ಇದುವರೆಗೆ ನಿಷೇಧಿತ ಸಂಘಟನೆಗಳ 121 ಮಂದಿಯನ್ನು ಬಂಧಿಸಲಾಗಿದೆ ಎಂದು ಪಾಕ್ ಆಂತರಿಕ ಸಚಿವಾಲಯ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ನಿಷೇಧಿತ ಉಗ್ರ ಸಂಘಟನೆಗಳಿಗೆ ಸೇರಿದ ಧಾರ್ಮಿಕ ಶಾಲೆಗಳು, ಆಸ್ಪತ್ರೆಗಳು ಮತ್ತು ಆಂಬುಲೆನ್ಸ್ ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದೆ.
ಪುಲ್ವಾಮ ಉಗ್ರ ದಾಳಿಯ ನಂತರ ಅಂತಾರಾಷ್ಟ್ರೀಯ ಸಮುದಾಯದಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪಾಕಿಸ್ತಾನ, ಕಾಶ್ಮೀರದ ಪುಲ್ವಾಮದಲ್ಲಿ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಅವರ ಸಹೋದರ ಮುಫ್ತಿ ಅಬ್ದುರ್ ಹಾಗೂ ಅದೇ ಸಂಘಟನೆಗೆ ಸೇರಿದ ಕಮಾಂಡರ್ ಹಮ್ಮದ್ ಅಜರ್ ಸೇರಿದಂತೆ 44 ಉಗ್ರರನ್ನು ನಿನ್ನೆ ಬಂಧಿಸಿತ್ತು.
SCROLL FOR NEXT