ವಿದೇಶ

ಉತ್ತರ ಕೊರಿಯಾದಿಂದ ಮತ್ತೊಂದು ಖಂಡಾಂತರ ಕ್ಷಿಪಣಿ ಪ್ರಯೋಗ; ದಕ್ಷಿಣ ಕೊರಿಯಾ ಆತಂಕ

Srinivasamurthy VN
ಪ್ಯೋಗ್ಯಾಂಗ್: ಉತ್ತರ ಕೊರಿಯಾ ಮತ್ತೊಂದು ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ ಎಂದು ದಕ್ಷಿಣ ಕೊರಿಯಾ ಆತಂಕ ವ್ಯಕ್ತಪಡಿಸಿದೆ.
ಈ ಬಗ್ಗೆ ದಕ್ಷಿಣ ಕೊರಿಯಾ ಮತ್ತು ಅಮೆರಿಕ ಆತಂಕ ವ್ಯಕ್ತಪಡಿಸಿದ್ದು, ಶನಿವಾರ ಮುಂಜಾನೆ ಜಪಾನ್ ಸಮುದ್ರ ತೀರ ಪ್ರದೇಶದಲ್ಲಿ ಉತ್ತರ ಕೊರಿಯಾ ಸುಮಾರು 200 ಕಿಮೀ ದೂರ ಕ್ರಮಿಸಿ ದಾಳಿ ನಡೆಸುವ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯ ಪರೀಕ್ಷೆ ನಡೆಸಿದೆ ಎಂದು ಹೇಳಿವೆ. 
ಆದರೆ ಅಮೆರಿಕ ಮತ್ತು ದಕ್ಷಿಣ ಕೊರಿಯಾದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಕೊರಿಯಾ ಇನ್ನೂ ಸ್ಪಷ್ಟನೆ ನೀಡಿಲ್ಲ.
ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾನ್ ಉನ್ ಅಣ್ವಸ್ತ್ರಗಳ ಪ್ರಯೋಗವನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಕಳೆದ ಒಂದು ವರ್ಷದಿಂದ ಅಮೇರಿಕ ಮಾತುಕತೆ ನಡೆಸುತ್ತಿದೆ. ಅಲ್ಲದೆ ಈ ಹಿಂದೆ ನಡೆದ ಶೃಂಗಸಭೆಯಲ್ಲಿ ಕಿಮ್ ಜಾಂಗ್ ಉನ್ ಕೂಡ ಅಣ್ವಸ್ತ್ರ ಪರೀಕ್ಷೆ ಕೈ ಬಿಡುವ ಕುರಿತು ಭರವಸೆ ನೀಡಿದ್ದರು. ಆದರೆ ಇದಕ್ಕೆ ಷರತ್ತು ವಿಧಿಸಿದ್ದ ಕಿಮ್ ಜಾಂಗ್ ಉನ್ 'ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ದೇಶದ ಮೇಲೆ ಹೇರಿರುವ ದಿಗ್ಭಂಧನವನ್ನು ತೆರವುಗೊಳಿಸುವಂತೆ ಆಗ್ರಹಿಸಿದ್ದರು. ಆದರೆ, ಇದಕ್ಕೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ ಸೂಚಿಸದ ಪರಿಣಾಮ ಮಾತುಕತೆ ಮುರಿದು ಬಿದ್ದಿತ್ತು. 
SCROLL FOR NEXT