ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದ ಪರಮಾಪ್ತ ರಾಷ್ಟ್ರ ಇಸ್ರೇಲ್ ಶುಭಾಶಯ ಕೋರಿದೆ.
ಅತ್ತ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಪ್ರಚಂಡ ದಿಗ್ವಿಜಯದತ್ತ ದಾಪುಗಾಲಿರಿಸಿರುವಂತೆಯೇ ಇತ್ತ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಅವರು ಟ್ವೀಟ್ ಮಾಡಿ ಪ್ರಧಾನಿ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.
ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಂಡಕ್ಕೆ ಶುಭ ಕೋರುತ್ತೇನೆ. ಭಾರತ ಮತ್ತು ಇಸ್ರೇನ್ ನಡುವಿನ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ. ಒಟ್ಟಿಗೆ ಕೈ ಜೋಡಿಸಿ ನಮ್ಮ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯ ಮಾಡೋಣ ಎಂದು ನೆತಾನ್ಯಾಹು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಇಸ್ರೇಲ್ ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನೆತಾನ್ಯಾಹು ನೇತೃತ್ವ ಮೈತ್ರಿಕೂಟ ಜಯಭೇರಿ ಭಾರಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics