ವಿದೇಶ

ಲೋಕಸಭಾ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರ

Srinivasamurthy VN
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸುವ ಮೂಲಕ ಸತತ 2ನೇ ಬಾರಿಗೆ ಅಧಿಕಾರದ ಗದ್ದುಗೆಯತ್ತ ಸಾಗಿರುವ ಪ್ರಧಾನಿ ಮೋದಿ ಅವರಿಗೆ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಇತ್ತ ಮೋದಿ ಜಯಭೇರಿ ಸ್ಪಷ್ಟವಾಗುತ್ತಿದ್ದಂತೆಯೇ ಅತ್ತ ವಿಶ್ವನಾಯಕರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಭಾರತದ ಪರಮಾಪ್ತ ರಾಷ್ಟ್ರ ಇಸ್ರೇಲ್ ಪ್ರಧಾನಿ ನೆತಾನ್ಯಹು ಅವರು ಪ್ರಧಾನಿ ಮೋದಿಗೆ ಶುಭ ಕೋರಿ, ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಂತೆಯೇ ರಷ್ಯಾ ಪ್ರಧಾನಿ ವ್ಲಾಡಿಮಿರ್ ಪುಟಿನ್ ಅವರೂ ಕೂಡ ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದ್ದು, ದೂರವಾಣಿ ಕರೆ ಮಾಡಿರುವ ಪುಟಿನ್ ಪ್ರಧಾನಿ ಮೋದಿ ಮತ್ತು ಬಿಜೆಪಿ ಪಕ್ಷಕ್ಕೆ ಶುಭ ಕೋರಿದ್ದಾರೆ. ಅಂತೆಯೇ ಚೀನಾ ಪ್ರಧಾನಿ ಕ್ಸಿ ಜಿನ್ ಪಿಂಗ್ ಅವರೂ ಕೂಡ ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದ್ದಾರೆ. 
ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಕೂಡ ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದ್ದು, ಜಪಾನ್ ಮತ್ತು ಭಾರತದ ನಡುವಿನ ಸ್ನೇಹ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದ್ದಾರೆ.
ಆಫ್ಘನ್ ಅಧ್ಯಕ್ಷ ಅಶ್ರಫ್ ಘನಿ ಅವರೂ ಕೂಡ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದು, ಭಾರತದ ಪ್ರಜೆಗಳು ತಮ್ಮ ಬಲವಾದ ನಿರ್ಧಾರ ಪ್ರಕಟಿಸಿದ್ದು, ನೂತನ ಮೋದಿ ಸರ್ಕಾರ ಮತ್ತು ಆಫ್ಘನ್ ಸರ್ಕಾರ ಒಗ್ಗೂಡಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. 
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರೂ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದು, ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ ಗೇಲ್ ವಾಂಗ್ ಚುಕ್ ಅವರೂ ಕೂಡ ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದ್ದಾರೆ.
SCROLL FOR NEXT