ವಿದೇಶ

ಚುನಾವಣೆಯಲ್ಲಿ ಮೋದಿಗೆ ಜಯ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳೀದ್ದೇನು?

Raghavendra Adiga
ಇಸ್ಲಾಮಾಬಾದ್: ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಸ್ಪಷ್ಟ ಬಹುಮತ ಬಂದ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶುಭ ಹಾರೈಸಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದು "ಭಾರತದಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳ ಚುನಾವಣಾ ಗೆಲುವಿಗಾಗಿ ಪ್ರಧಾನಿ ಮೋದಿಯನ್ನು ನಾನು ಅಭಿನಂದಿಸುತ್ತೇನೆ. ದಕ್ಷಿಣ ಏಷ್ಯಾದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ" ಎಂದಿದ್ದಾರೆ.
ಇತ್ತ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸಹ ಬಿಜೆಪಿ ಹಾಗೂ ನರೇಂದ್ರ ಮೋದಿಯವರಿಗೆ ಚುನಾವಣೆಯ ಫಲಿತಾಶಕ್ಕಾಗಿ ಶುಭ ಹರೈಸಿದ್ದಾರೆ.
SCROLL FOR NEXT