ಪಿಎಂ ಮೋದಿ-ಇಂಡೋನೇಷಿಯಾ ಅಧ್ಯಕ್ಷರ ಭೇಟಿ 
ವಿದೇಶ

ಪಿಎಂ ಮೋದಿ-ಇಂಡೋನೇಷಿಯಾ ಅಧ್ಯಕ್ಷರ ಭೇಟಿ: ವ್ಯಾಪಾರ ಸಹಭಾಗಿತ್ವ, ಉಗ್ರನಿಗ್ರಹ ಬಗೆಗೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷಿಯಾ ಅಧ್ಯಕ್ಷ ಜೋಕೊ ವಿಡೋಡೋ ಅವರೊಂದಿಗೆ ಭಾನುವಾರ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಉಭಯ ನಾಯಕರು ಭಯೋತ್ಪಾದನೆ ಮತ್ತು ಉಗ್ರವಾದದ ಬೆದರಿಕೆಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಬ್ಯಾಂಕಾಕ್: ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷಿಯಾ ಅಧ್ಯಕ್ಷ ಜೋಕೊ ವಿಡೋಡೋ ಅವರೊಂದಿಗೆ ಭಾನುವಾರ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಉಭಯ ನಾಯಕರು ಭಯೋತ್ಪಾದನೆ ಮತ್ತು ಉಗ್ರವಾದದ ಬೆದರಿಕೆಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಇಬ್ಬರೂ ನಾಯಕರು ಥಾಯ್ ಲ್ಯಾಂಡಿನಲ್ಲಿ ನಡೆದ ಆಸಿಯಾನ್  ಶೃಂಗಸಭೆಯಹಿನ್ನೆಲೆಯಲ್ಲಿ ಮುಖಾಮುಖಿಯಾಗಿದ್ದಾರೆ.

ಭಾರತ ಮತ್ತು ಇಂಡೋನೇಷಿಯಾ ಸಮುದ್ರ ತೀರದ ನೆರೆಹೊರೆ ರಾಷ್ಟ್ರಗಳಾಗಿದ್ದು ಉಭಯ ನಾಯಕರು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ.ಇಂಡೋನೇಷಿಯಾದ ಅಧ್ಯಕ್ಷರಾಗಿ ವಿಡೋಡೊ ಅವರ ಎರಡನೇ ಅವಧಿ ಪ್ರಾರಂಬಗೊಂಡಿದ್ದು ಇದಕ್ಕಾಗಿ ಮೋದಿ ಅವರನ್ನು ಅಭಿನಂದಿಸಿದ್ದಾರೆ.ವಿಶ್ವದ ಎರಡು ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಬಹುಮತದ  ಸಮಾಜಗಳಾಗಿ, ರಕ್ಷಣೆ, ಭದ್ರತೆ, ಸಂಪರ್ಕ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸಲು ಇಂಡೋನೇಷಿಯಾದೊಡನೆ ವ್ಯಾಪಾರ ಮತ್ತು ಹೂಡಿಕೆಗೆ ಭಾರತ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸುವ ಕುರಿತುಚರ್ಚಿಸಿದ್ದಲ್ಲದೆ  ವಾಹನ ಮತ್ತು ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಸರಕುಗಳಿಗೆ ಹೆಚ್ಚಿನ ಮಾರುಕಟ್ಟಯ ಅಗತ್ಯವನ್ನು  ಎತ್ತಿ ತೋರಿಸಿದರು.ಭಾರತೀಯ ಕಂಪನಿಗಳು ಇಂಡೋನೇಷಿಯಾದಲ್ಲಿ ಸಾಕಷ್ಟು ಹೂಡಿಕೆ ಮಾಡಿರುವುದನ್ನು ಒತ್ತಿ ಹೇಳಿದ ಪ್ರಧಾನಿ ಇಂಡೋನೇಷಿಯಾದ  ಕಂಪನಿಗಳನ್ನು ಭಾರತದಲ್ಲಿ ಹೂಡಿಕೆಗೆ ಆಹ್ವಾನಿಸಿದ್ದಾರೆ.ಮಾತ್ರವಲ್ಲದೆ ಮುಂದಿನ ವರ್ಷ ಪರಸ್ಪರ ಅನುಕೂಲಕರ ಸಮಯದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಅಧ್ಯಕ್ಷ ಜೊಕೊವಿ ಅವರನ್ನು ಆಹ್ವಾನಿಸಿದ್ದಾರೆ 

"ಇಂಡೋನೇಷಿಯಾದೊಂದಿಗಿನ ತನ್ನ ದ್ವಿಪಕ್ಷೀಯ ಸಂಬಂಧಕ್ಕೆ ಭಾರತವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ, ಇದರೊಂದಿಗೆ ನಾವು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವನ್ನು ಹಂಚಿಕೊಳ್ಳುತ್ತೇವೆ" ಎಂದು ಹೇಳಿಕೆ ತಿಳಿಸಿದೆ.

ಈ ವರ್ಷ ಭಾರತ ಮತ್ತು ಇಂಡೋನೇಷಿಯಾ  ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70 ನೇ ವರ್ಷಾಚರಣೆಯನ್ನು ಆಚರಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT