ಸಾಂದರ್ಭಿಕ ಚಿತ್ರ 
ವಿದೇಶ

ನೇಪಾಳ: ನದಿಗೆ ಉರುಳಿ ಬಿದ್ದ ಬಸ್- 15 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ 

ಮಧ್ಯ ನೇಪಾಳದ ನದಿಯಲ್ಲಿ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಘಟನೆಯಲ್ಲಿ 15 ಜನರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಮಾಸ್ಕೋ: ಮಧ್ಯ ನೇಪಾಳದ ನದಿಯಲ್ಲಿ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಘಟನೆಯಲ್ಲಿ 15 ಜನರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ರಾಜಧಾನಿ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್, ಸಿಂದುಪಾಲ್‌ಚೌಕ್ ಜಿಲ್ಲೆಯ ಸುಂಕೋಶಿ ನದಿಗೆ ಉರುಳಿದೆ ಎಂದು ಹಿಮಾಲಯನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

ದುರ್ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸದಬಾಹರ್ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದುರ್ಘಟನೆಗೆ ಈ ವರೆಗೂ ಕಾರಣಗಳು ತಿಳಿದುಬಂದಿಲ್ಲ.  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!