ಸಾಂದರ್ಭಿಕ ಚಿತ್ರ 
ವಿದೇಶ

ಕ್ಯಾನಿಫೋರ್ನಿಯಾ: ಶಾಲೆಯಲ್ಲಿ ಗುಂಡಿನ ದಾಳಿ, ಇಬ್ಬರು ವಿದ್ಯಾರ್ಥಿಗಳು ಸಾವು

ದಕ್ಷಿಣ ಕ್ಯಾಲಿಫೋರ್ನಿಯಾದ ಸೌಗಸ್ ಪ್ರೌಢ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಗುಂಡು ಹಾರಿಸಿದ್ದು, ಬಳಿಕ ತಾನೂ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ವಾಷಿಂಗ್ಟನ್: ದಕ್ಷಿಣ ಕ್ಯಾಲಿಫೋರ್ನಿಯಾದ ಸೌಗಸ್ ಪ್ರೌಢ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಗುಂಡು ಹಾರಿಸಿದ್ದು, ಬಳಿಕ ತಾನೂ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಗುರುವಾರ ಜನ್ಮದಿನ ಆಚರಿಸಿಕೊಂಡ ಶಂಕಿತ ಆರೋಪಿ, ಶಾಲೆಗೆ ತೆರಳಿ ತನ್ನ ಬೆನ್ನ ಹಿಂದೆ ಇದ್ದ ಚೀಲದಿಂದ ಪಿಸ್ತೂಲ್ ತೆಗೆದು ಐವರು ಸಹಪಾಠಿಗಳ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಬಳಿಕ ತನ್ನ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಇವೆಲ್ಲವೂ ಕೇವಲ 16 ಸೆಕೆಂಡುಗಳಲ್ಲಿ ನಡೆದಿದೆ ಎಂದು ಬಿಬಿಸಿ ವರದಿ ಮಾಡಿದೆ.

ಲಾಸ್ ಏಂಜಲೀಸ್ ಕೌಂಟಿ ಶೆರಿಫ್ ಅಲೆಕ್ಸ್ ವಿಲ್ಲಾನುಯೆವಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಂಭೀರ ಗಾಯಗೊಂಡಿರುವ ಶಂಕಿತನು ಈ ಕೃತ್ಯಕ್ಕೆ ಪಾಯಿಂಟ್ 45 ಕ್ಯಾಲಿಬರ್ ಅರೆ-ಸ್ವಯಂಚಾಲಿತ ಪಿಸ್ತೂಲ್ ಅನ್ನು ಬಳಸಿದ್ದಾನೆ ಎಂದು ಹೇಳಿದರು.

ಹದಿನಾರು ವರ್ಷದ ಹುಡುಗಿ ಹಾಗೂ 14 ವರ್ಷದ ಬಾಲಕ ಈ ದುರಂತದಲ್ಲಿ ಮೃತಪಟ್ಟಿದ್ದಾರೆ.

ಲಾಸ್ ಏಂಜಲೀಸ್ ಕೌಂಟಿ ಶೆರಿಫ್ ವಿಭಾಗದ ಕ್ಯಾಪ್ಟನ್ ಕೆಂಟ್ ವೆಜೆನರ್ ಸುದ್ದಿಗಾರರೊಂದಿಗೆ ಮಾತನಾಡಿ, ಶಂಕಿತನದ್ದೆಂದು ಹೇಳಲಾಗಿರುವ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ' ನಾಳೆ ಸೌಗಸ್ ಶಾಲೆಯಲ್ಲಿ ಮೋಜು ಮಾಡಿ' ಎಂದು ಬರೆದಿದ್ದಾನೆ.

ಈ ಘಟನೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳಿಗೆ ಉಪಾಧ್ಯಕ್ಷ ಮೈಕ್ ಪೆನ್ಸ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು "ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮತ್ತೊಂದು ಹೃದಯ ವಿದ್ರಾವಕ ದಿನ" ಎಂದು ಕರೆದಿದ್ದಾರೆ.

ಉತ್ತರ ಕ್ಯಾಲಿಫೋರ್ನಿಯಾದ ನಾಸಾದಲ್ಲಿ ಮಾತನಾಡಿದ ಅವರು, ' ಸಾಮೂಹಿಕ ಗುಂಡಿನ ದಾಳಿಯನ್ನು ಕೊನೆಗೊಳಿಸಲು ಈ ಆಡಳಿತವು ಕೈಗೊಂಡ ಸಂಕಲ್ಪ ಇನ್ನೂ ಹಾಗೇ ಉಳಿದಿದೆ. ನಮ್ಮ ಕಾಲದಲ್ಲಿ ಈ ದುಷ್ಟತನವನ್ನು ಕೊನೆಗೊಳಿಸುವವರೆಗೆ ಮತ್ತು ನಮ್ಮ ಶಾಲೆಗಳನ್ನು ಮತ್ತು ನಮ್ಮವರನ್ನು ಸುರಕ್ಷಿತವಾಗಿಸುವವರಿಗೆ ನಾವು ವಿಶ್ರಾಂತಿ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ತನಿಖಾಧಿಕಾರಿಗಳಿಗೆ ಸಹಕಾರ ನೀಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಡರಲ್ ಕಾನೂನು ಜಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಪೆನ್ಸ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌