ಭಯಾನಕ ದೃಶ್ಯ: ಝೂನಲ್ಲಿ ಸಿಂಹವಿದ್ದ ಸ್ಥಳಕ್ಕೆ ಜಿಗಿದ ಮಹಿಳೆ, ಮುಂದೇನಾಯ್ತು ಈ ವಿಡಿಯೋ ನೋಡಿ!
ಮಹಿಳೆಯೊಬ್ಬರು ಝೂನಲ್ಲಿ ಸಿಂಹವಿದ್ದ ಸ್ಥಳಕ್ಕೆ ಜಿಗಿದು ಸಿಂಹವನ್ನು ಕೆರಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನ್ಯೂಯಾರ್ಕ್: ಮಹಿಳೆಯೊಬ್ಬರು ಝೂನಲ್ಲಿ ಸಿಂಹವಿದ್ದ ಸ್ಥಳಕ್ಕೆ ಜಿಗಿದು ಸಿಂಹವನ್ನು ಕೆರಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಮೆರಿಕದ ನ್ಯೂಯಾರ್ಕ್ ನಲ್ಲಿರುವ ಬ್ರೊಂಕ್ಸ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ. ಝೂಗೆ ತೆರಳಿದ ಮಹಿಳೆಯೊಬ್ಬರು ಏಕಾಏಕಿ ಸಿಂಹವಿದ್ದ ಸ್ಥಳಕ್ಕೆ ಜಿಗಿದಿದ್ದಾರೆ. ನಂತರ ಅದರ ಮುಂದೆ ಡ್ಯಾನ್ಸ್ ಮಾಡಿ ಕೆರಳಿಸುವ ಯತ್ನ ಮಾಡಿದ್ದಾರೆ.
ಸದ್ಯ ಮಹಿಳೆಯನ್ನು ರಕ್ಷಿಸಲಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.
ಇನ್ನು ಝೂ ಕೀಪರ್ ಗಳು ಯಾರೇ ಆಗಲಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು. ಇದರಿಂದ ಜೀವವೇ ಹೋಗುವ ಸಾಧ್ಯತೆಗಳು ಇರುತ್ತವೆ ಎಂದರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.