ಭದ್ರತಾ ಸಿಬ್ಬಂದಿ 
ವಿದೇಶ

ಕಾಶ್ಮೀರ ಭೇಟಿಗೆ ಅಮೆರಿಕಾ ಸೆನೆಟರ್ ಗೆ ಪ್ರವೇಶ ನಿರಾಕರಣೆ

ಕಾಶ್ಮೀರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ತಮ್ಮ ಭೇಟಿಗೆ ಭಾರತೀಯ ಆಡಳಿತದಿಂದ ಪ್ರವೇಶ ನಿರಾಕರಿಸಲಾಗಿದೆ ಎಂದು ಡೆಮಾಕ್ರಟಿಕ್ ಪಕ್ಷದ ಅಮೆರಿಕಾದ ಸೆನೆಟರ್ ಹೇಳಿದ್ದಾರೆ.

ವಾಷಿಂಗ್ಟನ್ : ಕಾಶ್ಮೀರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ತಮ್ಮ ಭೇಟಿಗೆ ಭಾರತೀಯ ಆಡಳಿತದಿಂದ ಪ್ರವೇಶ ನಿರಾಕರಿಸಲಾಗಿದೆ ಎಂದು ಡೆಮಾಕ್ರಟಿಕ್ ಪಕ್ಷದ ಅಮೆರಿಕಾದ ಸೆನೆಟರ್ ಹೇಳಿದ್ದಾರೆ.

ಕಣಿವೆ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅರಿಯಲು ಕಾಶ್ಮೀರಕ್ಕೆ ಭೇಟಿ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಇದಕ್ಕೆ ಭಾರತೀಯ ಸರ್ಕಾರದಿಂದ ಅನುಮತಿ ದೊರೆಯಲಿಲ್ಲ, ಕಾಶ್ಮೀರ ಭೇಟಿಗೆ ಇದು ಸೂಕ್ತ ಸಮಯವಲ್ಲ ಎಂದು ಭಾರತ ಸರ್ಕಾರದಿಂದ ತಿಳಿಸಲಾಗಿದೆ ಎಂದು ಅಮೆರಿಕಾದ ಸೆನೆಟರ್ ಕ್ರಿಸ್ ವ್ಯಾನ್ ಹೊಲೆನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 

 ಸಂವಹನ ಜಾಲ ನಿರ್ಬಂಧಿಸಿರುವ ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ನೋಡಬೇಕಾಗಿತ್ತು. ಆದರೆ, ಇದಕ್ಕೆ ಭಾರತ ಸರ್ಕಾರ ಅವಕಾಶ ಮಾಡಿಕೊಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಒಂದು ವೇಳೆ ಯಾವುದನ್ನೂ ಬಚ್ಚಿಡುತ್ತಿಲ್ಲ ಎನ್ನುವುದಾದರೆ ಭಯವೇಕೆ? ಕಾಶ್ಮೀರ ಭೇಟಿಗೆ ಅವಕಾಶ ನೀಡಲಿ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. 

ಭಾರತ ಹಾಗೂ ಅಮೆರಿಕಾ ವಿಶ್ವದ ಅತಿದೊಡ್ಡ ಪ್ರಜಾಸತಾತ್ಮಕ ರಾಷ್ಟ್ರಗಳಾಗಿವೆ. ತಮ್ಮ ಮೌಲ್ಯಗಳ ಬಗ್ಗೆ ಹಂಚಿಕೊಂಡಿವೆ. ಈ ಸಂದರ್ಭದಲ್ಲಿ ಪಾರದರ್ಶಕತೆ ಪ್ರಮುಖವಾಗಿರುತ್ತದೆ ಎಂದು ಹೊಲೆನ್ ಹೇಳಿದ್ದಾರೆ. ಹೊಲೆನ್ ಹೇಳಿಕೆಗೆ ಸಂಬಂಧಿಸಿದಂತೆ ಭಾರತದ ಆಡಳಿತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.  

ಇದಕ್ಕೂ ಮುನ್ನ ಕಾಶ್ಮೀರದಲ್ಲಿನ ನಿರ್ಬಂಧಕ್ಕೆ ಸಂಬಂಧಿಸಿದಂತೆ ಅಮೆರಿಕಾ ಸೆನೆಟ್ ಸಮಿತಿಯಲ್ಲಿ ಭಾರತದ ವಿರುದ್ಧ ಮಸೂದೆ ಮಸೂದೆಯೊಂದನ್ನು ಪ್ರಸ್ತಾಪಿಸಲಾಯಿತು. ಈ ಮಸೂದೆ ಪ್ರಸ್ತಾಪಿಸಿದ ಅಮೆರಿಕಾ ಸೆನೆಟರ್ ವ್ಯಾನ್ ಹೊಲೆನ್,  ಭಾರತ- ಅಮೆರಿಕಾ ನಡುವಣ ಒಪ್ಪಂದಗಳು ಮಹತ್ವದಾಗಿವೆ. ಆದರೆ, ಕಾಶ್ಮೀರದಲ್ಲಿನ ಪ್ರಸ್ತುತ ಮಾನವ ಹಕ್ಕುಗಳ ಉಲ್ಲಂಘನೆ ಕಡೆಗೆ ಗಮನ ಹರಿಸಬೇಕಾಗಿದೆ. ಸಂವಹನ ಜಾಲವನ್ನು ಮರುಸ್ಥಾಪಿಸಬೇಕಾಗಿದೆ ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT