ಗಡಿಯಲ್ಲಿ ದುಸ್ಸಾಹಸ ತೋರಿದ ಪಾಕ್ ಸೈನಿಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ!
ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕ್ ಸೈನಿಕ ಮೃತಪಟ್ಟಿರುವುದಾಗಿ ಪಾಕಿಸ್ತಾನ ಸೇನೆ ತಿಳಿಸಿದೆ.
ಇಸ್ಲಾಮಾಬಾದ್: ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕ್ ಸೈನಿಕ ಮೃತಪಟ್ಟಿರುವುದಾಗಿ ಪಾಕಿಸ್ತಾನ ಸೇನೆ ತಿಳಿಸಿದೆ.
ಗಡಿ ನಿಯಂತ್ರಣ ರೇಖೆ ಬರೋಹ ಮತ್ತು ಚಿರಿಕ್ಟ್ ಬಳಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸುತ್ತಿದ್ದಾರೆ. ಈ ದಾಳಿ ಪಾಕ್ ಸೈನಿಕ ಮೃತಪಟ್ಟಿದ್ದು ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ ಎಂದು ಪಾಕ್ ಸೇನೆಯ ಮಾಧ್ಯಮ ವಿಭಾಗ ಅಂತರ ಸೇವೆಗಳು ಸಾರ್ವಜನಿಕ ಸಂಪರ್ಕ(ಐಎಸ್ಪಿಆರ್) ಹೇಳಿದೆ.
ಭಾರತೀಯ ಸೇನೆಯ ದಾಳಿಗೆ ಪ್ರತಿಯಾಗಿ ಪಾಕ್ ಸಹ ಪ್ರತ್ಯುತ್ತರ ನೀಡುತ್ತಿದ್ದು ಭಾರತದ ಕಡೆಯೂ ಸಾವು ನೋವು ಸಂಭವಿಸಿರುವ ಮಾಹಿತಿ ಇರುವುದಾಗಿ ಪಾಕ್ ಹೇಳಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.