ನ್ಯೂಯಾರ್ಕ್ ನಲ್ಲಿ ಶೂಟೌಟ್: ಗುಂಡಿಕ್ಕಿ ನಾಲ್ವರ ಹತ್ಯೆ- ವರದಿಗಳು
ಅಮೆರಿಕಾದ ನ್ಯೂಯಾರ್ಕ್ ನಲ್ಲಿ ಶೂಟೌಟ್ ನಡೆದಿದೆ. ಖಾಸಗಿ ಸಾಮಾಜಿಕ ಕ್ಲಬ್ ವೊಂದರಲ್ಲಿ ನಡೆದ ಶೂಟೌಟ್ ನಲ್ಲಿ ನಾಲ್ವರು ಹತ್ಯೆಯಾಗಿದ್ದಾರೆ ಎಂದು ಅಮೆರಿಕಾದ ಮಾಧ್ಯಮಗಳು ವರದಿ ಮಾಡಿವೆ.
ನ್ಯೂಯಾರ್ಕ್: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ಶೂಟೌಟ್ ನಡೆದಿದೆ. ಖಾಸಗಿ ಸಾಮಾಜಿಕ ಕ್ಲಬ್ ವೊಂದರಲ್ಲಿ ನಡೆದ ಶೂಟೌಟ್ ನಲ್ಲಿ ನಾಲ್ವರು ಹತ್ಯೆಯಾಗಿದ್ದಾರೆ ಎಂದು ಅಮೆರಿಕಾದ ಮಾಧ್ಯಮಗಳು ವರದಿ ಮಾಡಿವೆ.
ನ್ಯೂಯಾರ್ಕ್ ನ ಬ್ರೂಕ್ಲಿನ್ ಬರೋದಲ್ಲಿ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅನೇಕ ಜನರು ಗಾಯಗೊಂಡಿದ್ದಾರೆ ಎಂದು ಎನ್ ಬಿಸಿ ಮತ್ತಿತರ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ
ಶೂಟೌಟ್ ನಿಂದ ಗಾಯಗೊಂಡು ಸಾವು- ಬದುಕಿನ ನಡುವೆ ಹೋರಾಡುತ್ತಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಂತಕನ ಗುರುತು ಇನ್ನೂ ಪತ್ತೆ ಆಗಿಲ್ಲ. ಮತ್ತಷ್ಟು ಮಾಹಿತಿ ತಿಳಿದುಬರಬೇಕಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.