ಕ್ರಿಸ್ಟಲಿನಾ ಜಾರ್ಜೀವಾ 
ವಿದೇಶ

ಭಾರತ  ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ: ಆದರೆ, ಸಮಸ್ಯೆಗಳನ್ನು ಬಗೆಹರಿಸಬೇಕು-ಐಎಂಎಫ್  ಎಂಡಿ

ಭಾರತ ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ ಆದರೆ, ಧೀರ್ಘಕಾಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ  ಮತ್ತಿತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.

ವಾಷಿಂಗ್ಟನ್ : ಭಾರತ ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ ಆದರೆ, ಧೀರ್ಘಕಾಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ  ಮತ್ತಿತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.

ಆರ್ಥಿಕತೆಯ ಮೂಲಭೂತ ವಿಷಯಗಳಲ್ಲಿ ಭಾರತ ಕೆಲಸ ಮಾಡಿದೆ. ಆದರೆ, ಹಣಕಾಸು ಕ್ಷೇತ್ರದಲ್ಲಿ ಸಮಸ್ಯೆಗಳಿವೆ ವಿಶೇಷವಾಗಿ  ಬ್ಯಾಂಕೇತರ ಸಂಸ್ಥೆಗಳಲ್ಲಿ ಇದು ಹೆಚ್ಚಾಗಿದೆ. ಬ್ಯಾಂಕುಗಳನ್ನು ಕ್ರೊಢೀಕರಿಸಲು ಈಗ ಕ್ರಮ ಕೈಗೊಳ್ಳಬೇಕಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಅವರು ಸಹಾಯ ಮಾಡಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಮ್ಯಾನೇಜಿಂಗ್ ಡೈರೆಕ್ಟರ್ ಕ್ರಿಸ್ಟಲಿನಾ ಜಾರ್ಜೀವಾ  ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಆರ್ಥಿಕ ಬೆಳವಣಿಗೆ ಧೀರ್ಘಕಾಲೀನ ಕ್ರಮ ಕೈಗೊಳ್ಳಬೇಕಾಗಿದೆ. ಮಾನವ ಬಂಡವಾಳ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಮಹಿಳಾ ಕಾರ್ಮಿಕ ಪಡೆಯನ್ನು ಇದರೊಂದಿಗೆ ಮುಂದುವರೆಸಬೇಕಾಗಿದೆ. ಭಾರತದಲ್ಲಿ ಪ್ರತಿಭಾವಂತ ಮಹಿಳೆಯರಿದ್ದಾರೆ ಆದರೆ, ಅವರು ಮನೆಯಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಸದೃಢ ಆರ್ಥಿಕ ಬೆಳವಣಿಗೆ ಅಂದುಕೊಂಡಿದ್ದ ಭಾರತದ ಆರ್ಥಿಕತೆ  ಈ ಬಾರಿ ಶೇ. 6 ಕ್ಕೆ ಕುಸಿಯುವ ಸಾಧ್ಯತೆ ಇದೆ. ಭಾರತ ರಚನಾತ್ಮಕ ಸುಧಾರಣಾ ಕ್ರಮಗಳಿಗೆ ಆದ್ಯತೆ ನೀಡಬೇಕಾಗಿದೆ. ಇಂತಹ ಸುಧಾರಣಾ ಕ್ರಮಗಳನ್ನು ಮುಂದುವರೆಸಲಿದೆ ಎಂಬ ನಿರೀಕ್ಷೆ ಹೊಂದಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT