ನಿರ್ಮಲಾ ಸೀತಾರಾಮನ್ 
ವಿದೇಶ

ಮುಂದಿನ 5 ವರ್ಷಗಳಲ್ಲಿ ಭಾರತ ಮೂಲಭೂತ ಸೌಕರ್ಯಕ್ಕೆ 99 ಲಕ್ಷ ಕೋಟಿ ರೂ ಖರ್ಚು ಮಾಡಲಿದೆ: ನಿರ್ಮಲಾ ಸೀತಾರಾಮನ್ 

2024ಕ್ಕೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ಗೆ ಏರಿಕೆಯಾಗಬೇಕೆಂದು ಗುರಿ ಇಟ್ಟುಕೊಳ್ಳಲಾಗಿದೆ. 

ವಾಷಿಂಗ್ಟನ್: 2024ಕ್ಕೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ಗೆ ಏರಿಕೆಯಾಗಬೇಕೆಂದು ಗುರಿ ಇಟ್ಟುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಾಧಿಸಲು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ ಭಾರತ 1.4 ಟ್ರಿಲಿಯನ್ ಡಾಲರ್ ನಷ್ಟು ಖರ್ಚು ಮಾಡಲು ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


ನಿನ್ನೆ ವಾಷಿಂಗ್ಟನ್ ನಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯ ವಾರ್ಷಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಣಕಾಸು ಸಚಿವಾಲಯದಲ್ಲಿ ಕಾರ್ಯಪಡೆಯೊಂದನ್ನು ರಚಿಸಲಾಗಿದ್ದು ಮುಂದಿನ 5 ವರ್ಷಗಳಲ್ಲಿ ಆಗಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ನೀಲನಕ್ಷೆಯನ್ನು ತಯಾರಿಸಲಿದೆ ಎಂದರು.


2024-25ರ ಹೊತ್ತಿಗೆ ಭಾರತ ದೇಶದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ನ ಗುರಿ ತಲುಪಬೇಕಾದರೆ ವಿಶ್ವ ದರ್ಜೆಯ ಮೂಲಭೂತ ಸೌಕರ್ಯ ನೀಡುವುದು ನಮ್ಮ ಆದ್ಯತೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಾವು ಮೂಲಭೂತ ಸೌಕರ್ಯಗಳಿಗೆ 1.1 ಟ್ರಿಲಿಯನ್ ಡಾಲರ್ ನಷ್ಟು ಖರ್ಚು ಮಾಡಿದ್ದರೆ ಇನ್ನು 5 ವರ್ಷಗಳಲ್ಲಿ 1.4 ಟ್ರಿಲಿಯನ್ ಡಾಲರ್ ನಷ್ಟು ಹೂಡಿಕೆ ಮಾಡಲಿದ್ದೇವೆ ಎಂದರು.
ಕ್ರಿಯಾತ್ಮಕ ಹಣಕಾಸು ಯೋಜನೆಗಳಾದ ಮೂಲಭೂತ ಸೌಕರ್ಯ ಸಾಲ ನಿಧಿ(ಐಡಿಎಫ್), ರಿಯಲ್ ಎಸ್ಟೇಟ್ ಹೂಡಿಕೆ ಟ್ರಸ್ಟ್(ಆರ್ ಇಐಟಿ), ಮೂಲಭೂತಸೌಕರ್ಯ ಹೂಡಿಕೆ ಟ್ರಸ್ಟ್(ಇನ್ವ್ ಐಟಿ) ಮೊದಲಾದವುಗಳನ್ನು ಆರಂಭಿಸಿದ್ದು ಮುನ್ಸಿಪಲ್ ಬಾಂಡ್ ಗಳಿಗೆ ಚೌಕಟ್ಟು ರಚಿಸಲಿದೆ ಎಂದರು.


ದೇಶದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಗಳನ್ನು ಅಳವಡಿಸಲು ನಾವು ಈಗಾಗಲೇ ಮುಂದಾಗಿದ್ದೇವೆ. ಈಗಿರುವ ಮೂಲಭೂತ ಸೌಕರ್ಯಗಳನ್ನು ಆಧುನೀಕರಣಗೊಳಿಸಲು ಆಸ್ತಿ ಮರುಬಳಕೆ ಮಾದರಿ ಅಳವಡಿಸಿಕೊಳ್ಳುತ್ತಿದ್ದೇವೆ, ಈ ಮೂಲಕ ಸರ್ಕಾರದ ಹಣಕಾಸು ನೆರವನ್ನು ಖಾಸಗಿ ವಲಯದಲ್ಲಿ ಹೂಡಿಕೆ ಮಾಡಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನೋಡುತ್ತಿದ್ದೇವೆ ಎಂದು ಸಭೆಯಲ್ಲಿ ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ