ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ದಾಳಿ: ಪಾಕಿಸ್ತಾನ ಹೇಳಿದ್ದೇನು ಗೊತ್ತೇ?
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನುಗ್ಗಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.
ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನುಗ್ಗಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.
ಭಾರತೀಯ ಸೇನೆ ದಾಳಿ ನಡೆಸಿ ಪಾಕಿಸ್ತಾನದ ಸೈನಿಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ಮೇಜರ್ ಜನರಲ್ ಅಸೀಫ್ ಗಫೂರ್ ಟ್ವೀಟ್ ಮಾಡಿದ್ದಾರೆ.
ಭಾರತೀಯ ಸೇನೆಯಿಂದ ಸಿಎಫ್ ವಿ ಗಳ ಶಾಕೋಟ್, ನೌಶೆರಿ ಸೆಕ್ಟರ್ ಗಳಲ್ಲಿ ಅಪ್ರಚೋದಿತ ದಾಳಿ ನಡೆದಿದೆ. ಇದರಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.