ವಿದೇಶ

ಜಮ್ಮು, ಕಾಶ್ಮೀರ ವಿಭಜನೆ ಕಾನೂನು ಬಾಹಿರ ಎಂದ ಚೀನಾ; ಅದು ಆಂತರಿಕ ವಿಚಾರ: ಭಾರತ ತಿರುಗೇಟು 

Lingaraj Badiger

ಬೀಜಿಂಗ್: ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಹೇಳಿದೆ.

ನೂತನ ಕೇಂದ್ರಾಡಳಿತ ಪ್ರದೇಶಗಳಾದ ಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಭಾರದ ಅವಿಭಾಜ್ಯ ಅಂಗವಾಗಿದ್ದು, ಭಾರತದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ಇತರೆ ದೇಶಗಳು ಗೌರವಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಭಾರತ, ಚೀನಾಗೆ ತಿರುಗೇಟು ನೀಡಿದೆ.

ಜಮ್ಮು ಮತ್ತು ಕಾಶ್ಮೀರ ವಿಭಜನೆ ಭಾರತದ ಆಂತರಿಕ ವಿಚಾರವಾಗಿದ್ದು, ಚೀನಾ ಸೇರಿದಂತೆ ಇತರ ದೇಶಗಳು ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುತ್ತವೆ ಎಂದು ನಾವು ನಿರೀಕ್ಷಿಸುವುದಿಲ್ಲ. ಇತರೆ ದೇಶಗಳು ನಮ್ಮ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವುದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಜಮ್ಮು, ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ಭಾರತ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಆದರೆ ಇದರಲ್ಲಿ ಚೀನಾದ ಕೆಲವು ಪ್ರದೇಶಗಳನ್ನು ಅದರ ಆಡಳಿತ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಆರೋಪಿಸಿದ್ದಾರೆ. ಅಲ್ಲದೆ ಚೀನಾ ಚೀನಾ ಇದನ್ನು ಖಂಡಿಸುತ್ತದೆ. ಇದು ಕಾನೂನುಬಾಹಿರ ಮತ್ತು ಅನೂರ್ಜಿತವಾಗಿದೆ. ಇದು ಯಾವುದೇ ರೀತಿಯಲ್ಲಿ ಪರಿಣಾಮಕಾರಿಯಲ್ಲ ಮತ್ತು ಈ ಪ್ರದೇಶವು ಚೀನಾದ ನಿಯಂತ್ರಣದಲ್ಲಿದೆ ಎಂಬ ಅಂಶವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

SCROLL FOR NEXT