ವಿದೇಶ

ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ನೀಡುವುದಾಗಿ ಪಾಕಿಸ್ತಾನ ಘೋಷಣೆ

Srinivas Rao BV

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬೇಹುಗಾರಿಕೆ ಆರೋಪದಡಿ ಬಂಧನವಾಗಿರುವ ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ನೀಡುವುದಾಗಿ ಪಾಕಿಸ್ತಾನ ಮತ್ತೊಮ್ಮೆ ಘೋಷಿಸಿದೆ.
 
ನಿರ್ಧಾರವನ್ನು ಪ್ರಕಟಿಸಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್,  ಕುಲಭೂಷಣ್ ಜಾಧವ್ ಗೆ ವಿಯೆನ್ನಾ ಕನ್ವೆನ್ಷನ್ ಪ್ರಕಾರ ಸೆ.2 ರಂದು ರಾಜತಾಂತ್ರಿಕ ನೆರವನ್ನು  ನೀಡಲಾಗುತ್ತಿದೆ ಎಂದು ಘೋಷಿಸಿದ್ದಾರೆ. 

ಪಾಕಿಸ್ತನದ ಘೋಷಣೆಗೆ ಭಾರತ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಆದರೆ ಜಾಧವ್ ಗೆ ರಾಜತಾಂತ್ರಿಕ ನೆರವು ನೀಡಬೇಕಾದರೆ ಪಾಕಿಸ್ತಾನದ ಅಧಿಕಾರಿಗಳು ಅಲ್ಲಿರುವಂತಿಲ್ಲ. ಭಾರತದ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ಕುಲಭೂಷಣ್ ಜಾಧವ್ ಅವರಿಗೆ ಖಾಸಗಿ ಭೇಟಿಗೆ ಅವಕಾಶ ನೀಡುವುದನ್ನು ಮಾತ್ರ ಒಪ್ಪಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. 

ಕಳೆದ ಬಾರಿ ಆಗಸ್ಟ್ ನಲ್ಲಿ ಜಾಧವ್ ಗೆ ರಾಜತಾಂತ್ರಿಕ ನೆರವು ನೀಡಲು ಮುಂದಾಗಿದ್ದ ಪಾಕಿಸ್ತಾನ ಕೆಲವು ಷರತ್ತುಗಳನ್ನು ವಿಧಿಸಿತ್ತು.

SCROLL FOR NEXT