ವಿದೇಶ

ನವೆಂಬರ್ 16 ರಂದು ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆ

Srinivasamurthy VN

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆ ನವೆಂಬರ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ರಾತ್ರಿ ಪ್ರಕಟಿಸಿದೆ.

ಅಧಿಕಾರಾವಧಿಯ ಅವಧಿ ಮುಗಿಯಲು ಸುಮಾರು ಎರಡು ತಿಂಗಳ ಮೊದಲೇ ಚುನಾವಣಾ ದಿನಾಂಕವನ್ನು ನಿಗದಿಪಡಿಸಿದೆ. ವಿಶೇಷ ಗೆಜೆಟ್ ಅಧಿಸೂಚನೆಯಲ್ಲಿ, ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಅಕ್ಟೋಬರ್ 7 ರಿಂದ ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ದ್ವೀಪ ರಾಷ್ಟ್ರದ ಪ್ರಮುಖ ವಿರೋಧ ಪಕ್ಷವು ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರ ಕಿರಿಯ ಸಹೋದರ ಮತ್ತು ಮಾಜಿ ರಕ್ಷಣಾ ಕಾರ್ಯದರ್ಶಿ ಗೋಟಬಯಾ ರಾಜಪಕ್ಸೆ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಹೆಸರಿಸಿದೆ. ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಆಡಳಿತಾರೂಢ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್‌ಪಿ) ಮುಂದಿನ ವಾರ ತನ್ನ ಅಭ್ಯರ್ಥಿಯನ್ನು ಪ್ರಕಟಮಾಡಲಿದೆ ಎಂದು ಯುಎನ್‌ಪಿ ಪ್ರಧಾನ ಕಾರ್ಯದರ್ಶಿ ಅಕಿಲಾ ವಿರಾಜ್ ಕರಿಯವಾಸಂ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SCROLL FOR NEXT