ವಿದೇಶ

ಟ್ರಂಪ್ ಮತ್ತೆ ಭಾರತಕ್ಕೆ ಬನ್ನಿ: ಅಮೆರಿಕ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಆಹ್ವಾನ

Srinivasamurthy VN

ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿದ್ದು. ಈ ವೇಳೆ ಮತ್ತೊಮ್ಮೆ ಟ್ರಂಪ್ ರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ.

ಮಂಗಳವಾರ ಟ್ರಂಪ್ ರನ್ನು ಭೇಟಿ ಮಾಡಿದ ಟ್ರಂಪ್, ಕುಟುಂಬ ಸಮೇತರಾಗಿ ಮತ್ತೆ ಭಾರತಕ್ಕೆ ಭೇಟಿ ನೀಡಿ ಎಂದು ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಆಹ್ವಾನ ನೀಡಿದ್ದಾರೆ. ಇದಕ್ಕೂ ಮೊದಲು ನಡೆದ ಹೌಡಿ-ಮೋದಿ ಕಾರ್ಯಕ್ರದಲ್ಲಿಯೇ ಪ್ರಧಾನಿ ಮೋದಿ ಟ್ರಂಪ್ ಅವರಿಗೆ ಭಾರತಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು. ಈ ವೇಳೆ ನೀವು ನಿಮ್ಮ ಕುಟುಂಬ ಸಮೇತರಾಗಿ ಭಾರತಕ್ಕೆ ಬರಬೇಕು. ನಿಮಗೆ ಆತಿಥ್ಯ ನೀಡುವ ಅವಕಾಶವನ್ನು ನಮಗೆ ಕಲ್ಪಿಸಬೇಕು. ಆ ಮೂಲಕ ಉಭಯ ದೇಶಗಳ ಸೌಹಾರ್ಧ ಸಂಬಂಧ ವೃದ್ದಿಗೆ ಅವಕಾಶ ಮಾಡಿಕೊಡಿ ಎಂದು ಪ್ರಧಾನಿ ಮೋದಿ ಟ್ರಂಪ್ ರನ್ನು ಕೇಳಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ ಆಹ್ವಾನಕ್ಕೆ ಡೊನಾಲ್ಡ್ ಟ್ರಂಪ್ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳ ಭೇಟಿ ಮಾಡಿ ಶೀಘ್ರ ಈ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಜಯ್ ಗೋಖಲೆ ಅವರು, ಭಾರತದ ವತಿಯಿಂದ ಪ್ರಧಾನಿ ಮೋದಿ ಟ್ರಂಪ್ ಅವರಿಗೆ ಅಹ್ವಾನ ನೀಡಿದ್ದಾರೆ. ಈ ಕುರಿತಂತೆ ನಿರ್ಣಯ ಕೈಗೊಳ್ಳುವುದು ಟ್ರಂಪ್ ಮತ್ತು ಶ್ವೇತಭವನಕ್ಕೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ.

SCROLL FOR NEXT