ವಿಜಯನ್ 
ವಿದೇಶ

ಗಗನಸಖಿಗೆ ಲೈಂಗಿಕ ಕಿರುಕುಳ: ಸಿಂಗಪುರದಲ್ಲಿ ಭಾರತೀಯ ವ್ಯಕ್ತಿಗೆ ಜೈಲು ಶಿಕ್ಷೆ

2017ರಲ್ಲಿ ಕರಾಚಿ - ಸಿಂಗಪುರ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಪುರದ ಕಾಯಂ ನಿವಾಸಿ, ಭಾರತೀಯ ಮೂಲದ ವಿಜಯನ್‌ ಮಾಥನ್‌ ಗೋಪಾಲ್‌ ಅವರಿಗೆ ಕೋರ್ಟ್ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಸಿಂಗಪುರ: 2017ರಲ್ಲಿ ಕರಾಚಿ - ಸಿಂಗಪುರ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಪುರದ ಕಾಯಂ ನಿವಾಸಿ, ಭಾರತೀಯ ಮೂಲದ ವಿಜಯನ್‌ ಮಾಥನ್‌ ಗೋಪಾಲ್‌ ಅವರಿಗೆ ಕೋರ್ಟ್ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ನವೆಂಬರ್ 2, 2017ರಲ್ಲಿ ಈ ಘಟನೆ ನಡೆದಿದ್ದು, ಪಾನಮತ್ತನಾಗಿದ್ದ 39 ವರ್ಷದ ವಿಜಯನ್ ಅವರು 22 ವರ್ಷದ ಯುವತಿಯ ಮುಖವನ್ನು ಮುಟ್ಟಿ, ನೀನು ತುಂಬಾ ಸುಂದರವಾಗಿದ್ದೀಯ ಎಂದು ಹೇಳಿದ್ದಲ್ಲದೇ, ತನ್ನ ಕೈಗಳಿಂದ ಯುವತಿಯ ಕೆನ್ನೆಯನ್ನು ಸವರಿ ಅಸಭ್ಯವಾಗಿ ನಡೆದುಕೊಂಡ ಆರೋಪ ಸಾಭೀತಾಗಿದ್ದು, ಅಪರಾಧಿಗೆ ನಾಲ್ಕು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

ವಿಮಾನ ಸಿಂಗಪುರದಲ್ಲಿ ಇಳಿಯುತ್ತಿದ್ದಂತೆ ಈ ಘಟನೆಗೆ ಸಂಬಂಧಿಸಿದಂತೆ ಯುವತಿ ಸ್ಕೂಟ್ ವಿಮಾನಯಾನ ಸಂಸ್ಥೆಗೆ ಮತ್ತು ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶರಾದ ಸಲೀನಾ ಇಶಾಕ್ ಅವರು, ವಿಜಯನ್ ಅವರಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!