ವಿಧಿಶಾ ಮೈತ್ರಾ 
ವಿದೇಶ

ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು?: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವ ಪಾಕಿಸ್ತಾನದ ಮಾನವನ್ನು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು? ಎಂದು ಪ್ರಶ್ನೆ ಮಾಡಿದೆ.

ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವ ಪಾಕಿಸ್ತಾನದ ಮಾನವನ್ನು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು? ಎಂದು ಪ್ರಶ್ನೆ ಮಾಡಿದೆ.

ವಿಶ್ವಸಂಸ್ಥೆಯ ಸಭೆಯಲ್ಲಿ ಚರ್ಚಾ ಸಂದರ್ಭದಲ್ಲಿ ಮಾತನಾಡಿದ ಭಾರತದ ವಿದೇಶಾಂಗ ಸಚಿವಾಲಯದ ಮೊದಲ ಕಾರ್ಯದರ್ಶಿ ವಿಧಿಶಾ ಮೈತ್ರಾ ಅವರು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು?.... ಉಗ್ರರಿಗೆ ಪಿಂಚಣಿ ನೀಡುತ್ತಿದ್ದೇವೆ ಎಂದು ಪಾಕ್​ ಒಪ್ಪಿಕೊಳ್ಳಲಿದೆಯೇ..? ಎಂದು ಪ್ರಶ್ನಿಸಿದ್ದಾರೆ.

ಅಣ್ವಸ್ತ್ರ ಸಹಿತ ರಾಷ್ಟ್ರಗಳ ನಡುವೆ ಯುದ್ಧ ನಡೆದ ಅದರ ಪರಿಣಾಮವನ್ನು ಇಡೀ ವಿಶ್ವವೇ ಅನುಭವಿಸಬೇಕು ಎನ್ನುವ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಹೇಳಿಕೆಗೆ ತಿರುಗೇಟು ನೀಡಿದ ಅವರು, 'ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಉಗ್ರರಿಗೆ ಪಿಂಚಣಿ ನೀಡುತ್ತಿರುವ ವಿಚಾರವನ್ನು ಪಾಕ್​ ಒಪ್ಪಿಕೊಳ್ಳಲಿದೇಯೇ ಎಂದು ಪ್ರಶ್ನಿಸಿದ್ದಾರೆ. ಅಂತೆಯೇ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾಷಣದ ಕುರಿತು ಟೀಕಾ ಪ್ರಹಾರ ನಡೆಸಿದ ಅವರು, 'ಇಮ್ರಾನ್​ ಖಾನ್​ ಮಾತನಾಡಿದ್ದರ ಅರ್ಥ ಹೇಗಿತ್ತು ಎಂದರೆ ತಿಕ್ಕಾಟ ನಡೆಯುತ್ತಿರುವುದು ಅಮೆರಿಕ ಮತ್ತು ಅವರ ನಡುವೆ, ಶ್ರೀಮಂತರು-ಬಡವರು, ಉತ್ತರ ಮತ್ತು ದಕ್ಷಿಣ, ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ, ಮುಸ್ಲಿಂ ಮತ್ತು ಇತರರ ನಡುವೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ರಕ್ತದೋಕುಳಿ, ದಂಗೆ ಏಳುವಿಕೆಯಂತಹ ಹೇಳಿಕೆಗಳು ಪಾಕಿಸ್ತಾನದ ಪ್ರಧಾನಿಗೆ ಶೋಭಿಸುವುದಿಲ್ಲ.  21ನೇ ಶತಮಾನದ ಹೊಸ್ತಿಲಲ್ಲಿ ಇಂತಹ ನಡೆ ಇತರೆ ರಾಷ್ಟ್ರಗಳ ಮೇಲೂ ನಕರಾತ್ಮಕ ಪರಿಣಾಮ ಬೀರುತ್ತದೆ ಎಂದು ಟೀಕಿಸಿದರು. 

ಅಂತೆಯೇ ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಅಲ್​-ಖೈದಾ ಹಾಗೂ ಇತರರ ಸಂಘಟನೆಯ 130 ಉಗ್ರರಿಗೆ ಪಿಂಚಣಿ ನೀಡುತ್ತಿರುವ ಏಕೈಕ ರಾಷ್ಟ್ರ ಎಂದರೆ ಅದು ಪಾಕಿಸ್ತಾನ ಮಾತ್ರ. ಈ ಬಗ್ಗೆ ಪ್ರಶ್ನೆ ಮಾಡಿದರು ಅದು ಸತ್ಯಾಂಶವನ್ನು ಒಪ್ಪಿಕೊಳ್ಳುತ್ತದೆಯೇ ಎಂದು ಕಿಡಿಕಾರಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!