ವಿದೇಶ

ಬುದ್ಧಿ ಕಲಿಯದ ಇಮ್ರಾನ್: ಪಾಕ್‌ನಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ

Vishwanath S

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯದ ವೇಳೆಗೆ ಸುಮಾರು 50 ಸಾವಿರ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳಬಹುದಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಸೇವಾ ಸಚಿವಾಲಯ ನೀಡಿರುವ ವರದಿ ತಿಳಿಸಿದೆ.

ದೇಶದಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳದಿದ್ದರೆ  ಪಾಕಿಸ್ತಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏಪ್ರಿಲ್ ಅಂತ್ಯದ ವೇಳೆಗೆ 50 ಸಾವಿರ ದಾಟಲಿದೆ ಎಂದು ಸರ್ವೋಚ್ಛ ನ್ಯಾಯಾಲಯಕ್ಕೆ ರಾಷ್ಟ್ರೀಯ ಆರೋಗ್ಯ ಸೇವಾ ಸಚಿವಾಲಯ ಶನಿವಾರ ವರದಿ ಸಲ್ಲಿಸಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 50 ಸಾವಿರ ದಾಟಲಿದೆ. ಈ ವೇಳೆ 2,392 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಬೇಕಾಗುತ್ತದೆ. 7,024 ಮಂದಿಯ ಪರಿಸ್ಥಿತಿ ಗಂಭೀರವಾಗಿರುತ್ತದೆ. ಇನ್ನು 41,482 ಮಂದಿಯನ್ನು ಹೋಮ್ ಕ್ವಾರಂಟೈನ್ ನಲ್ಲಿಡಬೇಕಾಗುತ್ತದೆ ಎಂದು ವರದಿಯಲ್ಲಿ ತಿಳಿಸಿದೆ. 

ಪಾಕಿಸ್ತಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,800ಕ್ಕೆ ಏರಿದ್ದು 44 ಮಂದಿ ಮೃತಪಟ್ಟಿದ್ದಾರೆ.

SCROLL FOR NEXT