ವಿದೇಶ

'ಶೀಘ್ರ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಳ್ಳಿ': ಅನಾರೋಗ್ಯ ಪೀಡಿತ ಬ್ರಿಟೀಷ್ ಪ್ರಧಾನಿ'ಗೆ ಪ್ರಧಾನಿ ಮೋದಿ

Srinivasamurthy VN

ಲಂಡನ್: ಕೊರೋನ್ ವೈರಸ್ ತೀವ್ರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟೀಷ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರು, ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು   ಹಾರೈಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಹ್ಯಾಂಗ್ ಇನ್ ದೇರ್, ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 

ಜಾನ್ಸನ್ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈರಸ್ ಲಕ್ಷಣಗಳು ಬೋರಿಸ್ ಅವರನ್ನು ನಿರಂತರವಾಗಿ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ  ಬೋರಿಸ್ ಅವರನ್ನು ಭಾನುವಾರ ಸಂಜೆ ಲಂಡನ್ ನ ಸೇಂಟ್ ಥಾಮಸ್ ಆಸ್ಪತ್ರೆಗೆ  ದಾಖಲಿಸಲಾಗಿತ್ತು.

SCROLL FOR NEXT