ಅಮೆರಿಕಾದಲ್ಲಿ ಎಡೆಬಿಡದೆ ಕಾಡುತ್ತಿರುವ ಕೊರೋನಾ: ವೈರಸ್'ಗೆ 25,000 ಮಂದಿ ಬಲಿ, 6 ಲಕ್ಷ ಜನರಿಗೆ ಸೋಂಕು
ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ಎಡೆಬಿಡದೆ ಕಾಡುತ್ತಿದ್ದು, ಮಂಗಳವಾರ ಒಂದೇ ದಿನ 1500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 25,000 ದಾಟಿದೆ. ಇನ್ನು ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ ಎಂದು ವರದಿಗಳು ತಿಳಿಸಿವೆ.
ನ್ಯೂಯಾರ್ಕ್: ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ಎಡೆಬಿಡದೆ ಕಾಡುತ್ತಿದ್ದು, ಮಂಗಳವಾರ ಒಂದೇ ದಿನ 1500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 25,000 ದಾಟಿದೆ. ಇನ್ನು ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ ಎಂದು ವರದಿಗಳು ತಿಳಿಸಿವೆ.
ನ್ಯೂಯಾರ್ಕ್ ಒಂದರಲ್ಲಿಯೇ ಸಾವಿನ ಸಂಖ್ಯೆ 10,000 ದಾಟಿದೆ. ಅಲ್ಲದೆ, ಇಲ್ಲಿ ಸೋಂಕಿತರ ಸಂಖ್ಯೆ 202,630ಕ್ಕೆ ತಲುಪಿದೆ. ನ್ಯೂಜೆರ್ಸಿಯಲ್ಲಿ 68,824 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 2,805 ಮಂದಿ ಬಲಿಯಾಗಿದ್ದಾರೆ.
ಇನ್ನುಳಿದಂತೆ ಮ್ಯಾಸಚೂಸೆಟ್ಸ್, ಮಿಚಿಗನ್, ಪೆನ್ಸಿಲ್ವೇನಿಯಾ, ಕ್ಯಾಲಿಫೋರ್ನಿಯಾ, ಇಲಿನಾಯ್ಸ್ ಮತ್ತು ಲೂಯಿಸಿಯಾನದಲ್ಲಿ 20,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.