ಡೊನಾಲ್ಡ್ ಟ್ರಂಪ್ 
ವಿದೇಶ

ಚೀನಾ ಲ್ಯಾಬ್ ನಲ್ಲಿ ಸೃಷ್ಟಿಯಾಯ್ತಾ ಕೊರೋನಾ ವೈರಸ್: ಅಮೆರಿಕ ತನಿಖೆ ಪ್ರಾರಂಭ! 

ಕೊರೋನಾ ವೈರಸ್ ನ ಮೂಲ ಇಂದಿಗೂ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಈ ನಡುವೆ ಕೊರೋನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಸೋರಿಕೆಯಾಗಿದೆಯೋ ಅಥವಾ ಬೇರೆ ಮೂಲಗಳಿಂದ ಹರಡಿದೆಯೋ ಎಂಬುದನ್ನು ತಿಳಿಯಲು ತಮ್ಮ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 

ವಾಷಿಂಗ್ ಟನ್: ಕೊರೋನಾ ವೈರಸ್ ನ ಮೂಲ ಇಂದಿಗೂ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಈ ನಡುವೆ ಕೊರೋನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಸೋರಿಕೆಯಾಗಿದೆಯೋ ಅಥವಾ ಬೇರೆ ಮೂಲಗಳಿಂದ ಹರಡಿದೆಯೋ ಎಂಬುದನ್ನು ತಿಳಿಯಲು ತಮ್ಮ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 

ಕೊರೋನಾ ವೈರಸ್ ಸೃಷ್ಟಿಯಾಗಿದ್ದರ ರಹಸ್ಯವನ್ನು ಭೇದಿಸುವುದಕ್ಕಾಗಿ ತನಿಖೆ ನಡೆಸಲಾಗುತ್ತಿದೆ, ಸಂಭವಿಸಿರುವ ಈ ಭಯಾನಕ ಪರಿಸ್ಥಿತಿ ಯಾಕೆ ಸೃಷ್ಟಿ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಮೈಕ್ ಪಾಂಪಿಯೊ ಮಾತನಾಡಿದ್ದು, ಕೊರೋನಾ ವಿಷಯದಲ್ಲಿ ಗೊತ್ತಿರುವ ಮಾಹಿತಿಯ ಕುರಿತು ಚೀನಾ ಪಾರದರ್ಶಕವಾಗಿರಬೇಕು ಎಂದು ತಾಕೀತು ಮಾಡಿದ್ದಾರೆ. 

ಚೀನಾದ ವಿದೇಶಾಂಗ ವ್ಯವಹಾರಗಳ ಉನ್ನತ ಅಧಿಕಾರಿಗೆ ಅಮೆರಿಕ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಮೈಕ್ ಪಾಂಪಿಯೋ ಚೀನಾ ಕೋವಿಡ್ ವಿಷಯದಲ್ಲಿ ಪಾರದರ್ಶಕವಾಗಿರಬೇಕು ಮುಂದಿನ ದಿನಗಳಲ್ಲಿ ಕೊರೋನಾ ವೈರಸ್ ಸೋಂಕು ಸ್ಫೋಟಗಳನ್ನು ತಡೆಗಟ್ಟಲು ಚೀನಾ ಮಾಹಿತಿ ಹಂಚಿಕೊಳ್ಳಬೇಕೆಂದು ಹೇಳಿದ್ದರು. 

ಅಮೆರಿಕ ನಡೆಗೆ ಚೀನಾ ಅಸಮಾಧಾನ ಹೊರಹಾಕಿದ್ದು, ತಾನು ಕೋವಿಡ್-19 ವಿಷಯದಲ್ಲಿ ಪಾರದರ್ಶಕವಾಗಿಯೇ ಇರುವುದಾಗಿ ಹೇಳಿದೆ. ಇನ್ನು ಅಮೆರಿಕಾಗೆ ಚೀನಾದ ವುಹಾನ್ ಪ್ರಯೋಗಾಲಯದಲ್ಲಿ ನೇರವಾಗಿ ಕಾರ್ಯನಿರ್ವಹಣೆಗೆ ಅವಕಾಶ ನೀಡಿದರೆ ಜಾಗತಿಕ ಮಟ್ಟದಲ್ಲಿ ಜೀವಗಳನ್ನು ರಕ್ಷಿಸಬಹುದು ಎಂದು ಟ್ರಂಪ್ ಆಡಳಿತದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಹೇಳಿಕೆಗೆ ಚೀನಾ ಮತ್ತಷ್ಟು ಕೆರಳಿದ್ದು, ವಿಶ್ವದ ಎರಡು ಬೃಹತ್ ಆರ್ಥಿಕತೆಗಳ ನಡುವೆ ಮತ್ತೆ ಅಸಮಾಧಾನ ಭುಗಿಲೆದ್ದಿದೆ. 

ಫಾಕ್ಸ್ ನ್ಯೂಸ್ ವರದಿಯ ಪ್ರಕಾರ ಚೀನಾದ ವೈರಾಲಜಿ ಪ್ರಯೋಗಾಲಯದಿಂದ ಕೊರೋನಾ ವೈರಸ್ ಹರಡಿದೆ. ಇದು ಜೈವಿಕ ಅಸ್ತ್ರವಲ್ಲ. ವೈರಸ್ ವಿರುದ್ಧ ಹೋರಾಡಲು ಅಮೆರಿಕಕ್ಕೆ ಸರಿಸಮಾನದ ಅಥವಾ ಅದಕ್ಕಿಂತಲೂ ಹೆಚ್ಚಿನ ಸಾಮರ್ಥ್ಯವಿದೆ ಎಂದು ತೋರಿಸಲು ಈ ವೈರಸ್ ಅಭಿವೃದ್ಧಿ ಪಡಿಸಿರಬಹುದು ಎಂದು ವರದಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ