ಸಂಗ್ರಹ ಚಿತ್ರ 
ವಿದೇಶ

ವಿಶ್ವವನ್ನೇ ಬೆಚ್ಚಿ ಬೀಳಿಸುತ್ತಿದೆ ಕೊರೋನಾ ತೀವ್ರತೆ: ಸೋಂಕಿತರ ಸಂಖ್ಯೆ 21.5 ಲಕ್ಷಕ್ಕೆ ಏರಿಕೆ, ಸಾವಿನ ಸಂಖ್ಯೆ 143,844ಕ್ಕೆ ಏರಿಕೆ 

ಚೀನಾದಲ್ಲಿ ಹುಟ್ಟಿ ವಿಶ್ವದ 200ಕ್ಕೂ ಹೆಚ್ಚು ದೇಶಗಳನ್ನು ವ್ಯಾಪಿಸಿ ಸಾವಿನ ಬಲೆಯನ್ನೇ ಬೀಸಿರುವ ಮಹಾಮಾರಿ ಕೊರೋನಾ ವೈರಸ್ ಸೋಂಕು ದಿನೇ ದಿನೇ ಆದೆಷ್ಟು ವೇಗದಲ್ಲಿ ಹರಡುತ್ತಿದೆ ಎಂಬುದಕ್ಕೆ ಇದೀಗ ಮತ್ತೊಂದು ಉದಾಹರಣೆ ಲಭಿಸಿದೆ. 

ಲಂಡನ್; ಚೀನಾದಲ್ಲಿ ಹುಟ್ಟಿ ವಿಶ್ವದ 200ಕ್ಕೂ ಹೆಚ್ಚು ದೇಶಗಳನ್ನು ವ್ಯಾಪಿಸಿ ಸಾವಿನ ಬಲೆಯನ್ನೇ ಬೀಸಿರುವ ಮಹಾಮಾರಿ ಕೊರೋನಾ ವೈರಸ್ ಸೋಂಕು ದಿನೇ ದಿನೇ ಆದೆಷ್ಟು ವೇಗದಲ್ಲಿ ಹರಡುತ್ತಿದೆ ಎಂಬುದಕ್ಕೆ ಇದೀಗ ಮತ್ತೊಂದು ಉದಾಹರಣೆ ಲಭಿಸಿದೆ. 

ಗುರುವಾರದ ಹೊತ್ತಿಗೆ ವಿಶ್ವದಾದ್ಯಂತ 21 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ವ್ಯಾಪಿಸಿದೆ. ಈ ಪೈಕಿ ಮೊದಲ ಪ್ರಕರಣ ದಾಖಲಾಗಿದಾಗಿನಿಂದ ಸೋಂಕಿತರ ಸಂಖ್ಯೆ 10 ಲಕ್ಷಕ್ಕೆ ತಲುಪಲು 93 ದಿನಗಲನ್ನು ತೆಗೆದುಕೊಂಡಿದ್ದರೆ, ನಂತರದ 10 ಲಕ್ಷದ ಗಡಿದಾಟಲು ಕೇವಲ 13 ದಿನಗಳನ್ನು ತೆಗೆದುಕೊಂಡಿದೆ.

ವಿಶ್ವದಾದ್ಯಂತ ಇರುವ ಒಟ್ಟು 21 ಲಕ್ಷ ಸೋಂಕಿತರ ಪೈಕಿ ಅಮೆರಿಕಾ ಮತ್ತು ಐರೋಪ್ಯ ದೇಶಗಳ ಪಾಲು ಶೇ.80ರಷ್ಟಿದೆ. ಅಂದರೆ, 13ಲಕ್ಷಕ್ಕೂ ಹೆಚ್ಚು ಜನ ಈ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ. 

ವಿಶ್ವದೆಲ್ಲೆಡೆ 2,153,620 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, 143,844 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರಲ್ಲಿ ಅಮೆರಿಕಾ ಪ್ರಜೆಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೊಳಗಾಗಿದ್ದಾರೆ. ಅಮೆರಿಕಾದಲ್ಲಿ 667,801, ಸ್ಪೇನ್ 184,948, ಇಟಲಿ 168,941, ಜರ್ಮನಿ 137,698, ಫ್ರಾನ್ಸ್ 147,091 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಇನ್ನು  ಸಾವಿನ ಸಂಖ್ಯೆಗೆ ಬಂದರೆ, ಇಟಲಿಯಲ್ಲಿ 22,170, ಸ್ಪೇನ್ ನಲ್ಲಿ 19,315, ಫ್ರಾನ್ಸ್ ನಲ್ಲಿ 17,941, ಯುಕೆಯಲ್ಲಿ 13,759 ಮಂದಿ ಬಲಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

T20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!

ಆಯ್ಕೆ ಸಮಿತಿ ಅಧ್ಯಕ್ಷರ ಆಯ್ಕೆ ಕಸರತ್ತು; BCCI ಆಫರ್ ತಿರಸ್ಕರಿಸಿದ ಸ್ಟಾರ್‌ ಗಳು, 100 ಟೆಸ್ಟ್‌ ಅನುಭವಿ ಆಟಗಾರರಿಂದಲೇ ನಕಾರ?

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!