ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಮೆರಿಕಾದಲ್ಲಿ 24 ಗಂಟೆಗಳಲ್ಲಿ 4,591 ಕೊರೋನಾ ಸೋಂಕಿತರು ಸಾವು!

ಮಾರಕ ಕೊರೋನಾ ಸೋಂಕಿಗೆ ಕಳೆದ 24 ಗಂಟೆಗಳಲ್ಲಿ ಅಮೆರಿಕಾದಲ್ಲಿ 4 ಸಾವಿರದ 591 ಮಂದಿ ಬಲಿಯಾಗಿದ್ದು ಜಗತ್ತಿನಲ್ಲಿಯೇ ಅಧಿಕವಾಗಿದೆ.

Sumana Upadhyaya
Updated On : 17 Apr 2020, 12:39 pm

ವಾಷಿಂಗ್ಟನ್: ಮಾರಕ ಕೊರೋನಾ ಸೋಂಕಿಗೆ ಕಳೆದ 24 ಗಂಟೆಗಳಲ್ಲಿ ಅಮೆರಿಕಾದಲ್ಲಿ 4 ಸಾವಿರದ 591 ಮಂದಿ ಬಲಿಯಾಗಿದ್ದು ಜಗತ್ತಿನಲ್ಲಿಯೇ ಅಧಿಕವಾಗಿದೆ.

ಜಾನ್ಸ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯದ ಅಂಕಿಅಂಶ ಪ್ರಕಾರ ನಿನ್ನೆ ರಾತ್ರಿ 8 ಗಂಟೆ ಹೊತ್ತಿಗೆ ಕೇವಲ 24 ಗಂಟೆಗಳಲ್ಲಿ 4 ಸಾವಿರದ 591 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ವಾಲ್ ಸ್ಟ್ರೀಟ್ ಜರ್ನಲ್ ತಿಳಿಸಿದೆ.ಇದಕ್ಕಿಂತ ಮೊದಲು ಬುಧವಾರ ಸೋಂಕಿಗೆ ಅಲ್ಲಿ 2 ಸಾವಿರದ 569 ಮಂದಿ ಮೃತಪಟ್ಟಿದ್ದರು. ನಿನ್ನೆ ಹೊತ್ತಿಗೆ ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷದ 62 ಸಾವಿರಕ್ಕೇರಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾ ದೇಶದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡ ಕೊರೋನಾ ಸೋಂಕು ಇಲ್ಲಿಯವರೆಗೆ ಪ್ರಪಂಚದಾದ್ಯಂತ 1 ಲಕ್ಷದ 44 ಸಾವಿರ ಮಂದಿಯನ್ನು ಬಲಿ ತೆಗೆದುಕೊಂಡಿದೆ. 2.1 ಮಿಲಿಯನ್ ಗಿಂತಲೂ ಹೆಚ್ಚು ಮಂದಿ ಸೋಂಕಿತರು ವಿಶ್ವದಲ್ಲಿದ್ದಾರೆ.

Advertisement

Advertisement

ಅಮೆರಿಕದಲ್ಲಿ 6 ಲಕ್ಷದ 71 ಸಾವಿರ ಮಂದಿ ಸೋಂಕಿತರಾಗಿದ್ದು 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅಮೆರಿಕದ ನ್ಯೂಯಾರ್ಕ್, ನ್ಯೂಜೆರ್ಸಿ ಮತ್ತು ಸುತ್ತಮುತ್ತಲ ರಾಜ್ಯಗಳಲ್ಲಿ ಅತಿಹೆಚ್ಚಿನ ಸೋಂಕಿತರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments