ಟ್ರಂಪ್ ನಿದ್ದೆಗೆಡಿಸಿದ ಕೊರೋನಾ: 40 ಸಾವಿರ ದಾಟಿದ ಸಾವಿನ ಸಂಖ್ಯೆ, 7.60 ಲಕ್ಷ ಮಂದಿಗೆ ಸೋಂಕು!
ಅಮೆರಿಕದಲ್ಲಿ ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ದಿನಂಪ್ರತಿ 1000ಕ್ಕೂ ಹೆಚ್ಚು ಮಂದಿ ಬಲಿಯಾಗುತ್ತಿದ್ದು ಸಾವಿನ ಸಂಖ್ಯೆ 40 ಸಾವಿರ ಗಡಿ ದಾಟಿದೆ.
ವಾಷಿಂಗ್ಟನ್: ಅಮೆರಿಕದಲ್ಲಿ ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ದಿನಂಪ್ರತಿ 1000ಕ್ಕೂ ಹೆಚ್ಚು ಮಂದಿ ಬಲಿಯಾಗುತ್ತಿದ್ದು ಸಾವಿನ ಸಂಖ್ಯೆ 40 ಸಾವಿರ ಗಡಿ ದಾಟಿದೆ.
ಅಮೆರಿಕದಲ್ಲಿ ಸದ್ಯ ಸೋಂಕಿತರ ಸಂಖ್ಯೆ 7,60,000 ದಾಟಿದ್ದು ಇಂದು ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 1251 ಮಂದಿ ಬಲಿಯಾಗಿದ್ದು ಒಟ್ಟಾರೆ 40,265 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇನ್ನು ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 24 ಲಕ್ಷ ದಾಟಿದ್ದು 1,64,565 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು 6,15,668 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.