ಸಂಗ್ರಹ ಚಿತ್ರ 
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಸಾವಿನ ಸಂಖ್ಯೆ 184,186ಕ್ಕೆ ಏರಿಕೆ, 2,636,989 ಮಂದಿಯಲ್ಲಿ ಸೋಂಕು ಪತ್ತೆ 

ವಿಶ್ವದಾದ್ಯಂತ ಕೊರೋನಾ ತನ್ನ ರೌದ್ರ ನರ್ತನವನ್ನು ಮುಂದುವರೆಸಿದ್ದು, ವೈರಸ್'ಗೆ ಈ ವರೆಗೂ 184,186 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಸೋಂಕಿತರ ಸಂಖ್ಯೆ 2,636,989ಕ್ಕೆ ಏರಿಕೆಯಾಗಿದೆ. 

ಲಂಡನ್: ವಿಶ್ವದಾದ್ಯಂತ ಕೊರೋನಾ ತನ್ನ ರೌದ್ರ ನರ್ತನವನ್ನು ಮುಂದುವರೆಸಿದ್ದು, ವೈರಸ್'ಗೆ ಈ ವರೆಗೂ 184,186 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಸೋಂಕಿತರ ಸಂಖ್ಯೆ 2,636,989ಕ್ಕೆ ಏರಿಕೆಯಾಗಿದೆ. 

ಜಗತ್ತಿನ ಬಹುತೇಕ ಎಲ್ಲ ದೇಶಗಳಲ್ಲೂ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ.. ಈಗಾಗಲೇ ವಿಶ್ವಾದ್ಯಂತ ಕೊರೋನಾ ವೈರಸ್​ನಿಂದ 1.84 ಲಕ್ಷ ಜನರು ಸಾವನ್ನಪ್ಪಿದ್ದಾರೆ. 26.36 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದೆ. ಅವರಲ್ಲಿ 7.9 ಲಕ್ಷ ಜನರು ಚಿಕಿತ್ಸೆ ಪಡೆದು, ಗುಣಮುಖರಾಗಿ  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ಸೋಂಕಿತ ದೇಶಗಳಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, 8.52 ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದುವರೆಗೂ ಅಮೆರಿಕದಲ್ಲಿ 47,750 ಜನರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

2ನೇ ಸ್ಥಾನದಲ್ಲಿರುವ ಸ್ಪೇನ್​ನಲ್ಲಿ 2,08,389 ಲಕ್ಷ ಜನರಿಗೆ ಸೋಂಕು ಪತ್ತೆಯಾಗಿದ್ದು,  21,283 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,141ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ಅಮೆರಿಕದಲ್ಲಿ ಕೊರೋನಾ ವೈರಸ್ ಗೆ ನಿತ್ಯ 2 ಸಾವಿರ ಮಂದಿ ಬಲಿಯಾಗುತ್ತಿದ್ದು, ಇದೇ ಕಾರಣಕ್ಕೆ ನ್ಯೂಯಾರ್ಕ್ ಗವರ್ನರ್ ಕೋವಿಡ್-19 ಪರೀಕ್ಷಾ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಿದ್ದಾರೆ. 

ಇಟಲಿಯಲ್ಲಿ ಸೋಂಕಿತರ ಸಂಖ್ಯೆ 1,87,327 ಕ್ಕೆ ಏರಿಕೆಯಾಗಿದ್ದು, 24,648 ಮಂದಿ ಸಾವನ್ನಪ್ಪಿದ್ದಾರೆ.  ಜರ್ಮನಿಯಲ್ಲಿ 1,50,648 ಲಕ್ಷ ಜನರಿಗೆ ಕೊರೋನಾ ಸೋಂಕಿದೆ. 5,315 ಜನರು ಮೃತಪಟ್ಟಿದ್ದಾರೆ. ಫ್ರಾನ್ಸ್  ನಲ್ಲಿ 1,19,151 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 21,340 ಮಂದಿ ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!