ಅಮೆರಿಕಾದಲ್ಲಿ ಕೊರೋನಾ ರೌದ್ರನರ್ತನ: ಕೇವಲ 24 ಗಂಟೆಗಳಲ್ಲಿ 3,176 ಮಂದಿ ಬಲಿ, ಸಾವಿನ ಸಂಖ್ಯೆ 50 ಸಾವಿರಕ್ಕೆ ಏರಿಕೆ
ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ವೈರಸ್ ತನ್ನ ರೌದ್ರ ನರ್ತನವನ್ನು ಮುಂದುವರೆಸಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 3,176 ಮಂದಿ ಬಲಿಯಾಗಿದ್ದಾರೆ.
ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ವೈರಸ್ ತನ್ನ ರೌದ್ರ ನರ್ತನವನ್ನು ಮುಂದುವರೆಸಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 3,176 ಮಂದಿ ಬಲಿಯಾಗಿದ್ದಾರೆ.
ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಈ ವರೆಗೂ 880,204 ಮಂದಿ ಸೋಂಕಿಗೊಳಗಾಗಿದ್ದಾರೆ.
ಅಲ್ಲದೆ, ಗುರುವಾರ ಒಂದೇ ದಿನ 3,176 ಮಂದಿಯಾಗಿರುವುದು, ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 880,204 ಮಂದಿಯ ಸೋಂಕಿತರ ಪೈಕಿ 85,922 ಮಂದಿ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.