ಅಮೆರಿಕಾದಲ್ಲಿ 24 ಗಂಟೆಗಳಲ್ಲಿ 1,258 ಮಂದಿ ಬಲಿ, ಸಾವಿನ ಸಂಖ್ಯೆ 51,017ಕ್ಕೆ ಏರಿಕೆ
ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾಗೆ ಒಟ್ಟು ಬಲಿಯಾದವರ ಸಂಖ್ಯೆ ಶುಕ್ರವಾರ 50 ಸಾವಿರ ಗಡಿ ದಾಟಿದೆ.
ನ್ಯೂಯಾರ್ಕ್: ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾಗೆ ಒಟ್ಟು ಬಲಿಯಾದವರ ಸಂಖ್ಯೆ ಶುಕ್ರವಾರ 50 ಸಾವಿರ ಗಡಿ ದಾಟಿದೆ.
ಶುಕ್ರವಾರ ಒಂದೇ ದಿನ 1,258 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 51,017ಕ್ಕೇ ಏರಿಕೆಯಾಗಿದೆ.
ದೇಶದಲ್ಲಿ ಕೊರೋನಾ ಪ್ರಭಾವ ಹೆಚ್ಚಾಗುತ್ತಿದ್ದರೂ, ವೈರಸ್ ಮತ್ತಷ್ಟು ಹರಡುವ ಸಾಧ್ಯತೆಗಳಿವೆ ಎಂದು ತಜ್ಞರು ಸಲಹೆಗಳ ನೀಡಿದ ಹೊರತಾಗಿಯೂ ಹಲವೆಡೆ ಲಾಕ್'ಡೌನ್ ನ್ನು ಸಡಿಲಗೊಳಿಸಲಾಗಿದೆ.
ಕೊರೋನಾ ಆರ್ಭಟದ ನಡುವೆಯೂ ದೇಶದ ಆರ್ಥಿಕತೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಜಾರ್ಜಿಯಾದ ಗವರ್ನರ್, ಅಂಗಡಿಗಳ ತೆರೆಯಲು ಅನುಮತಿ ನೀಡಿದ್ದಾರೆ. ಅನುಮತಿ ನೀಡಿದ್ದರ ನಡುವೆಯೂ ಕೆಲ ಮಾಲೀಕರು ವೈರಸ್'ಗೆ ಹೆದರಿ ಅಂಗಡಿಗಳ ತೆರೆಯಲು ನಿರಾಕರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.