ಸಂಗ್ರಹ ಚಿತ್ರ 
ವಿದೇಶ

ಕೊರೋನಾವೈರಸ್: ಜಾಗತಿಕವಾಗಿ 2 ಲಕ್ಷ ಮಂದಿಯನ್ನು ಬಲಿಪಡೆದ ಮಹಾಮಾರಿ, ಸೋಂಕಿತರ ಸಂಖ್ಯೆ 2,921,201 ಏರಿಕೆ

ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಈ ವರೆಗೂ ಮಹಾಮಾರಿ ವೈರಸ್ 2 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿದೆ.

ಲಂಡನ್: ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಈ ವರೆಗೂ ಮಹಾಮಾರಿ ವೈರಸ್ 2 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿದೆ. 

ಈ ನಡುವೆ  ವಿಶ್ವದ ವಿವಿಧ 2,921,201 ಸೋಂಕಿನಿಂದ ಬಳಲುತ್ತಿದ್ದು, ಅಮೆರಿಕಾ ರಾಷ್ಟ್ರ ಒಂದರಲ್ಲಿಯೇ 960,896 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ .ಅಲ್ಲದೆ, ಆ ರಾಷ್ಟ್ರದಲ್ಲಿ ಸಾವಿನ ಸಂಖ್ಯೆ 54,265ಕ್ಕೆ ಏರಿಕೆಯಾಗಿದೆ. 

ಇದರಂತೆ ಸೋಂಕಿಗೊಳಗಾಗಿರುವ 2,921,201 ಮಂದಿಯ ಪೈಕಿ 836,969 ಮಂದಿ ವೈರಸ್ ನಿಂದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 

ಸ್ಪೇನ್ ರಾಷ್ಟ್ರದಲ್ಲಿ 223,759 ಮಂದಿ ಸೋಂಕಿನಿಂದ ಬಳಲುತ್ತಿದ್ದು, 22,902 ಜನರು ಬಲಿಯಾಗಿದ್ದಾರೆ. ಇಟಲಿಯಲ್ಲಿಯೂ ಮಹಾಮಾರಿಯ ಆರ್ಭಟ ಹೆಚ್ಚಾಗಿಯೇ ಇದ್ದು, ಈ ವರೆಗೂ 195,351 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 26,384 ಮಂದಿ ಸಾವನ್ನಪ್ಪಿದ್ದಾರೆ. 

ಫ್ರಾನ್ಸ್ ನಲ್ಲಿ 161,488 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 22,614 ಜನರು ಸಾವನ್ನಪ್ಪಿದ್ದಾರೆ. ಜರ್ಮನಿಯಲ್ಲಿ 156,513 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 5,877 ಮಂದಿ ಮೃತಪಟ್ಟಿದ್ದಾರೆ. ಬ್ರಿಟನ್ ನಲ್ಲಿ 148,377 ಮಂದಿ ಸೋಂಕಿನಿಂದ ಬಳಲುತ್ತಿದ್ದು, 20,319 ಮಂದಿ ಬಲಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ