ಅಮೆರಿಕಾದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 1,303 ಮಂದಿ ಬಲಿ, ಸಾವಿನ ಸಂಖ್ಯೆ 58,492ಕ್ಕೆ ಏರಿಕೆ
ಅಮೆರಿಕಾದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ , 1,303 ಮಂದಿಯನ್ನು ಬಲಿ ಪಡೆದುಕೊಂಡಿದೆ. ಇದರಂತೆ ರಾಷ್ಟ್ರದಲ್ಲಿ ಸಾವಿನ ಸಂಖ್ಯೆ 58,492ಕ್ಕೆ ಏರಿಕೆಯಾಗಿದೆ.
ವಾಷಿಂಗ್ಟನ್: ಅಮೆರಿಕಾದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ , 1,303 ಮಂದಿಯನ್ನು ಬಲಿ ಪಡೆದುಕೊಂಡಿದೆ. ಇದರಂತೆ ರಾಷ್ಟ್ರದಲ್ಲಿ ಸಾವಿನ ಸಂಖ್ಯೆ 58,492ಕ್ಕೆ ಏರಿಕೆಯಾಗಿದೆ.
ಜಾನ್ ಹಾಪ್ಕಿನ್ಸ್ ಯುನಿವರ್ಸಿಟಿ ನೀಡಿರವ ಮಾಹಿತಿ ಪ್ರಕಾರ ಸೋಮವಾರ ಒಂದೇ ದಿನ 1,303 ಮಂದಿ ಬಲಿಯಾಗಿದ್ದಾರೆಂದು ಮಾಹಿತಿ ನೀಡಿದೆ. ಅಲ್ಲದೆ, 1,140,520 ಮಂದಿಯಲ್ಲಿ ಈ ವರೆಗೂ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.
ಕೊರೋನಾ ವೈರಸ್'ಗೆ ಅಮೆರಿಕಾ ಕಂಗಾಲಾಗಿದ್ದು, ವಿಶ್ವದ ಇತರೆ ರಾಷ್ಟ್ರಗಳಿಗಿಂತಲೂ ಕೊರೋನ ವೈರಸ್ ಅಮೆರಿಕಾದಲ್ಲಿ ವ್ಯಾಪಕವಾಗಿದೆ. ವೈರಸ್ ಮಟ್ಟಹಾಕಲು ಅಮೆರಿಕಾ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿರುವ ಹೊರತಾಗಿಯೂ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.