ಅಮೆರಿಕಾದಲ್ಲಿ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 2,502 ಮಂದಿ ಬಲಿ
ಅಮೆರಿಕಾದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಇದರಂತೆ ಕಳೆದ 24 ಗಂಟೆಗಳಲ್ಲಿ 2,502 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ವಾಷಿಂಗ್ಟನ್: ಅಮೆರಿಕಾದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಇದರಂತೆ ಕಳೆದ 24 ಗಂಟೆಗಳಲ್ಲಿ 2,502 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
2,502 ಮಂದಿ ಸಾವಿನೊಂದಿಗೆ ಅಮೆರಿಕಾದಲ್ಲಿ ಈ ವರೆಗೂ ಒಟ್ಟು 60,853 ಮಂದಿ ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 1,038,451ಕ್ಕೆ ಏರಿಕೆಯಾಗಿದೆ.
ಈ ನಡುವೆ 1,038,451 ಸೋಂಕಿತರ ಪೈಕಿ 120,444 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.