ಸಂಗ್ರಹ ಚಿತ್ರ 
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ರೌದ್ರನರ್ತನ: 2 ಕೋಟಿ ದಾಟಿದ ಸೋಂಕಿತರ ಸಂಖ್ಯೆ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ ಎಂದು ವರದಿಯಾಗಿದೆ.

ಮಾಸ್ಕೋ: ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ ಎಂದು ವರದಿಯಾಗಿದೆ.

ವಿಶ್ವದಾದ್ಯಂತ ಈವರೆಗೂ 20,001,019 ಮಂದಿ ಸೋಂಕಿನಿಂದ ಬಳಲುತ್ತಿದ್ದು, 7,33,897 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದೆ. 

20,001,019 ಮಂದಿ ಸೋಂಕಿತರ ಪೈಕಿ  12,200,847 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 7,800,172 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ವಿಶ್ವದಲ್ಲಿ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕಾವೊಂದರಲ್ಲೇ 5,251,446 ಸೋಂಕಿತರಿದ್ದು, ಈವರೆಗೆ 166,192 ಮಂದಿ ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 3,057,470 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 101,857 ಮಂದಿ ಮೃತಪಟ್ಟಿದ್ದಾರೆ. ಭಾರತದಲ್ಲಿ ಈವರೆಗೆ 2,267,153 ಜನರಿಗೆ ಕೊರೋನ ಸೋಂಕು ತಗುಲಿದ್ದು, 45,353 ಮಂದಿ ಬಲಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!