ಟೆಲ್ ಅವೀವ್: ಭ್ರಷ್ಟಾಚಾರ ಆರೋಪ ಮತ್ತು ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಅಸಮರ್ಪಕವಾಗಿ ನಿರ್ವಹಿಸಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಜೆರುಸಲೆಮ್‌ನಲ್ಲಿ ಮತ್ತೆ ಬೀದಗಿಳಿದಿದ್ದಾರೆ.
ಇತ್ತೀಚೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನೊಂದಿಗೆ ಐತಿಹಾಸಿಕ ರಾಜತಾಂತ್ರಿಕ ಒಪ್ಪಂದವನ್ನು ಮಾಡಿಕೊಂಡಿದ್ದ ಪ್ರಧಾನಿ ನಿವಾಸದ ಹೊರಗೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಡರಾತ್ರಿ ಘರ್ಷಣೆಯೂ ನಡೆದಿದೆ.
ಎಂಟನೇ ವಾರವೂ ನೆತನ್ಯಾಹು ವಿರೋಧಿ ಪ್ರತಿಭಟನೆ ಮುಂದುವರೆದಿದ್ದರಿಂದ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ಎಳೆದೊಯ್ಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ಎಂದು ಅಲ್ ಜಜೀರಾ ಸುದ್ದಿವಾಹಿನಿ ವರದಿ ಮಾಡಿದೆ.