ನೀರವ್ ಮೋದಿ 
ವಿದೇಶ

ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ, 2021ಕ್ಕೆ ಅಂತಿಮ ವಿಚಾರಣೆ

ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಡಿಸೆಂಬರ್ 29ರ ವರೆಗೆ ವಿಸ್ತರಿಸಿದೆ.

ಲಂಡನ್: ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಡಿಸೆಂಬರ್ 29ರ ವರೆಗೆ ವಿಸ್ತರಿಸಿದೆ.

ಪ್ರಸ್ತುತ ಜೈಲಿನಲ್ಲಿರುವ 48 ವರ್ಷದ ನೀರವ್ ಮೋದಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಎಮ್ಮಾ ಅರ್ಬುತ್‌ನೋಟ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 28 ದಿನಗಳ ಕಾಲ ವಿಸ್ತರಿಸಿದರು.

ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಮುಂದಿನ ವರ್ಷ ಜನವರಿ 7 ಮತ್ತು 8 ರಂದು ಅಂತಿಮ ಹಂತದ ವಿಚಾರಣೆ ನಡೆಯಲಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel