ಸಂಗ್ರಹ ಚಿತ್ರ 
ವಿದೇಶ

ಅಮೆರಿಕಾದಲ್ಲಿ ದಶಲಕ್ಷ ಮಂದಿಗೆ ಕೊರೋನಾ ಲಸಿಕೆ: ಸಿಡಿಸಿ ನಿರ್ದೇಶಕ ರಾಬರ್ಟ್ ರೆಡ್ ಫೀಲ್ಡ್

ಅಮೆರಿಕಾದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಅಡಚಣೆ ದಾಟಿ ಒಂದು ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ವೈರಸ್ ಲಸಿಕೆಯ ಮೊದಲ ಎರಡು ಡೋಸ್ ಗಳನ್ನು ಪಡೆದುಕೊಂಡಿದ್ದಾರೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ನಿರ್ದೇಶಕ ರಾಬರ್ಟ್ ರೆಡ್‌ಫೀಲ್ಡ್ ಹೇಳಿದ್ದಾರೆ.

ವಾಷಿಂಗ್ಟನ್: ಅಮೆರಿಕಾದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಅಡಚಣೆ ದಾಟಿ ಒಂದು ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ವೈರಸ್ ಲಸಿಕೆಯ ಮೊದಲ ಎರಡು ಡೋಸ್ ಗಳನ್ನು ಪಡೆದುಕೊಂಡಿದ್ದಾರೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ನಿರ್ದೇಶಕ ರಾಬರ್ಟ್ ರೆಡ್‌ಫೀಲ್ಡ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಮೆರಿಕಾ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ - ಹತ್ತು ದಿನಗಳ ಹಿಂದೆ ಪ್ರಾರಂಭವಾದ ಲಸಿಕೆ ಕಾರ್ಯಕ್ರಮದಲ್ಲಿ 1 ದಶ ಲಕ್ಷಕ್ಕೂ ಹೆಚ್ಚು ಮಂದಿ ಮೊದಲ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ರೆಡ್ಫೀಲ್ಡ್ ಬುಧವಾರ ಹೇಳಿದ್ದಾರೆ.

ಎಲ್ಲರಿಗೂ ಲಸಿಕೆ ಲಭ್ಯವಾಗುವವರೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ರೆಡ್‌ಫೀಲ್ಡ್ ಅಮೆರಿಕನ್ನರನ್ನು ಒತ್ತಾಯಿಸಿದ್ದಾರೆ. ಈ ವಾರದ ಅಂತ್ಯದ ವೇಳೆಗೆ, ಅಮೆರಿಕಾ ಅಧಿಕಾರಿಗಳು ಎರಡು ಅನುಮೋದಿತ ಲಸಿಕೆಗಳ ಸುಮಾರು 10 ದಶಲಕ್ಷ ಡೋಸ್‌ಗಳನ್ನು ವಿತರಿಸಿದ್ದಾರೆ, ಸರ್ಕಾರದ ಕೋರಿಕೆಯಂತೆ ಲಸಿಕೆ ಅಭಿವೃದ್ದಿ ಸಂಸ್ಥೆಗಳಾದ ಫೈಝರ್ , ಬಯೋಟೆಕ್ ಮತ್ತು ಮಾಡರ್ನಾ ಲಕ್ಷಾಂತರ ಪ್ರಮಾಣದಲ್ಲಿ ಲಸಿಕೆಗಳನ್ನು ಪೂರೈಸಲಿವೆ. ಪ್ರತಿ ಲಸಿಕೆಯನ್ನು ಎರಡು ಹಂತಗಳಲ್ಲಿ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ