ಕೊರೋನಾ ವೈರಸ್: ಚೀನಾದಿಂದ ಭಾರತಕ್ಕೆ ಬರುವವರಿಗೆ ಇ-ವೀಸಾ ಸೌಲಭ್ಯ ತಾತ್ಕಾಲಿಕ ಸ್ಥಗಿತ
ಚೀನಾದಿಂದ ಬರುವ ಪ್ರಯಾಣಿಕರು ಹಾಗೂ ವಿದೇಶಿಗರಿಗೆ ಇ-ವೀಸಾ ಸೌಲಭ್ಯವನ್ನು ಭಾರತ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಬೀಜಿಂಗ್: ಚೀನಾದಿಂದ ಬರುವ ಪ್ರಯಾಣಿಕರು ಹಾಗೂ ವಿದೇಶಿಗರಿಗೆ ಇ-ವೀಸಾ ಸೌಲಭ್ಯವನ್ನು ಭಾರತ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಚೀನಾದಲ್ಲಿ ಈ ವರೆಗೆ ಕೊರೋನಾ ವೈರಸ್ ಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 14,562 ಜನರು ಸೋಂಕು ಪೀಡಿತರಾಗಿದ್ದಾರೆ. ಭಾರತ, ಅಮೆರಿಕ, ಬ್ರಿಟನ್ ಸೇರಿದಂತೆ 25 ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಹರಡಿದೆ.
ಇತ್ತೀಚಿನ ಕೆಲವು ಬೆಳವಣಿಗೆಗಳಿಂದ ಇ-ವೀಸಾಗಳ ಮೂಲಾ ಭಾರತಕ್ಕೆ ಪ್ರಯಾಣ ಮಾಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ರಾಯಭಾರಿ ಕಚೇರಿ ಘೋಷಿಸಿದೆ.
ಚೀನಾದಲ್ಲಿರುವ ಬೇರೆ ದೇಶದವರು ಹಾಗೂ ಚೀನಾ ಪಾಸ್ಪೋರ್ಟ್ ಗಳನ್ನು ಹೊಂದಿರುವವರಿಗೆ ಈ ನಿಯಮ ಅನ್ವಯವಾಗಲಿದೆ. ಈಗಾಗಲೇ ಇ-ವೀಸಾಗಳನ್ನು ಹೊಂದಿರುವವರದ್ದೂ ಅಸಿಂಧುಗೊಳ್ಳಲಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.